ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದಿಂದಲೂ ಕರ್ನಾಟಕಕ್ಕೆ ಶಾಕ್: 3,000 ಕ್ಯೂಸೆಕ್ ನೀರು ಹರಿಸಲು ಆದೇಶ
ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ ಸಿಡಬ್ಲ್ಯೂಎಂಎ.ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.

ನವದೆಹಲಿ (ಅ.13): ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ವಿಚಾರಣೆ ಮಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದಲೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.
ನವದೆಹಲಿಯಲ್ಲಿ ಶುಕ್ರವಾರ ನಡೆದ ಕಾವೇರಿ ನೀರು ಹಂಚಿಕೆ ವಿಚಾರದ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕ್ಕೆ ಪುನಃ ಶಾಕ್ ನೀಡಿದೆ. ಕರ್ನಾಟಕದಲ್ಲಿ ತೀವರ ಬರಗಾಲ ಆವರಿಸಿದ್ದು, ಕುಡಿಯಲೂ ನೀರಿಲ್ಲವೆಂದು ವಾದ ಮಂಡಿಸಿದರೂ ಕೇಳದೇ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ನೀರನ್ನು ಹರಿಸುವಂತೆ ಆದೇಶವನ್ನು ಹೊರಡಿಸಿದೆ. ಇನ್ನು ಕಳೆದೆರಡು ದಿನಗಳ ಹಿಂದೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್‌ಸಿ)ಯು 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಕರ್ನಾಟಕಕ್ಕೆ ಆದೇಶ ನೀಡಲಾಗಿತ್ತು. ಈಗ (ಸಿಡಬ್ಲ್ಯೂಆರ್‌ಸಿ)ಯ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದೆ. ಆದರೆ, ಇದರಿಂದ ಕರ್ನಾಟಕದ ಹೋರಾಟಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.
ತಮಿಳ್ನಾಡಿಗೆ ಮತ್ತೆ ಕಾವೇರಿ ನೀರು ಆದೇಶ ಆಘಾತಕಾರಿ: ಎಚ್.ಡಿ.ಕುಮಾರಸ್ವಾಮಿ
ಮುಂದಿನ 15 ದಿನಗಳ ಕಾಲ ನೀರು ಹಂಚಿಕೆ: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ ಉಂಟಾಗಿದ್ದು, ಅ.16ರಿಂದ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್‌ನಂತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರುವು ಆದೇಶ ನೀಡಿದೆ. ನವದೆಹಲಿಯ ಶುಕ್ರವಾರ ನಡೆದ ಕಾವೇರಿ ನೀರು ಪ್ರಾಧಿಕಾರದ ಸಭೆಯಲ್ಲಿ ಈ ಸಂಬಂಧ ಆದೇಶ ನೀಡಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿಯಲ್ಲೂ ಹಿನ್ನಡೆ: ಕಳೆದೆರಡು ದಿನಗಳ ಹಿಂದೆ ಬುಧವಾರ ನಡೆದಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ವಾದ ಮಂಡನೆ ಮಾಡಿದ್ದ ಕರ್ನಾಟಕ ಪರ ಅಧಿಕಾರಿಗಳು, ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆಯಿದೆ. ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದ್ದು, ಅ.10ರವರೆಗೆ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಳಹರಿವಿನಲ್ಲಿ ಶೇ.50.89ರಷ್ಟು ಕೊರತೆಯಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಕುಡಿವ ನೀರಿಗೂ ಕೊರತೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಯಾವುದೇ ಆಶಾಭಾವ ಇಲ್ಲ. ಹೀಗಾಗಿ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಕರ್ನಾಟದ ಅಧಿಕಾರಿಗಳು ವಾದಿಸಿದ್ದರು.
ಕನ್ನಡಿಗರಿಗೆ ಒಲಿಯದ ಕಾವೇರಿ: ಮುಂದಿನ 15 ದಿನ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಲು ಆದೇಶ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಅಧಿಕಾರಿಗಳು, ಮುಂದಿನ 15 ದಿನಗಳವರೆಗೆ ನಿತ್ಯ 16,000 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶ ನೀಡಬೇಕು ಎಂದು ಆಗ್ರಹಿಸಿದರು. ಉಭಯ ರಾಜ್ಯಗಳ ವಾದ ಆಲಿಸಿದ ಸಮಿತಿಯ ಅಧಿಕಾರಿಗಳು, ಅ.16ರಿಂದ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶ ನೀಡಿದರು. ಅ.13ರ ಶುಕ್ರವಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಿಗದಿಯಾಗಿದ್ದು, ನಿಯಂತ್ರಣ ಸಮಿತಿಯ ಆದೇಶವನ್ನು ಪ್ರಶ್ನಿಸಲು ಕರ್ನಾಟಕ ಸಿದ್ಧತೆ ನಡೆಸಿತ್ತು. ಆದರೆ, ಈ ಆದೇಶ ಬದಲಾಯಿಸುವಲ್ಲಿ ಕರ್ನಾಟಕ ವಿಫಲವಾಗಿದೆ.