Cyclone : ರಾಜ್ಯಕ್ಕೆ 'ಮ್ಯಾಂಡೌಸ್' ಚಂಡಮಾರುತ ಆಗಮನ: ಮುಂದಿನ 5 ದಿನ ಮಳೆ
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ 'ಮ್ಯಾಂಡೌಸ್' ಚಂಡಮಾರುತ ಉಂಟಾಗಿದೆ. ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನಗಳು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು (ಡಿ.8): ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ 'ಮ್ಯಾಂಡೌಸ್' ಚಂಡಮಾರುತ ಉಂಟಾಗಿದೆ. ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನಗಳು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ ಎಂದು ತಿಳಿಸಿದೆ.
ಬಂಗಾಳ ಕೊಲ್ಲಿ ತೀರ ಪ್ರದೇಶಗಳನ್ನು ಹೊಂದಿರುವ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ 'ಮ್ಯಾಂಡೌಸ್' (Mandaus) ಚಂಡಮಾರುತ ಅಬ್ಬರ ಉಂಟಾಗಿದ್ದು, ಇದರ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ಕರ್ನಾಟಕದ ದಕ್ಷಿಣ ಒಳನಾಡಿಗೆ ನಾಳೆಯಿಂದ ನಾಲ್ಕು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ..!
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಬದಲಾಗುವ ಲಕ್ಷಣಗಳಿವೆ. ಅಲ್ಲಿಂದ ವಾಯುವ ದಿಕ್ಕಿನತ್ತ ಚಲಿಸಿ ಚಂಡಮಾರುತವಾಗಿ ಬದಲಾಗಿ ಕರಾವಳಿಗೆ ರಾಜ್ಯಗಳಿಗೆ ಗುರುವಾರ ಅಪ್ಪಳಿಸಲಿದೆ. ಮುಂದಿನ 24 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಆದರೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಬಹಳಷ್ಟು ಇದೆ.
ಬೆಂಗಳೂರಲ್ಲೂ ಹಗುರ ಮಳೆ: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಇನ್ನು ನಂತರ ದಿನವೂ ಇದೇ ಹವಾಮಾನ ಮುಂದುವರೆಯಲಿದ್ದು, ವಾಯುಗುಣದಲ್ಲಿ ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ ಎಂದು ಮಾಹಿತಿ ನೀಡಿದೆ.