Asianet Suvarna News Asianet Suvarna News

ಮೈಚುಂಗ್ ಚಂಡಮಾರುತ ಎಫೆಕ್ಟ್; ಕರ್ನಾಟಕದಲ್ಲೂ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮೈಚುಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone Michaung  Effect Heavy rain is likely in Karnataka IMD forecast rav
Author
First Published Dec 3, 2023, 8:57 AM IST

ಬೆಂಗಳೂರು (ಡಿ.3) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮೈಚುಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ಮೂರು ರಾಜ್ಯಗಳಿಗೆ ಕಟ್ಟೆಚ್ಚರ ನೀಡಲಾಗಿದೆ.  ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದಲ್ಲೂ ಹೈಅಲರ್ಟ್ ಘೋಷಿಸಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ. ಗಂಟೆಗೆ 100 ಕಿಮೀ ವೇಗದಲ್ಲಿ ಮೈಚುಂಗ ಚಂಡಮಾರುತ ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆ ಕರ್ನಾಟಕಕ್ಕೂ ತಟ್ಟಲಿರುವ ಸೈಕ್ಲೋನ್ ಎಫೆಕ್ಟ್. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಡಿಸೆಂಬರ್ 7ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ನಿರಾಳ:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮುಂಬರುವ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ದೊಡ್ಡ  ಪರಿಣಾಮಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾನುವಾರದ ವೇಳೆಗೆ ತೀವ್ರ ವಾಯುಭಾರ ಕುಸಿತವಾಗಲಿದೆ. ಸೋಮವಾರ ಮತ್ತು ಮಂಗಳವಾರದ ವೇಳೆಗೆ ಚಂಡಮಾರುತವಾಗಿ ರೂಪಗೊಳ್ಳಲಿದೆ. ಇದು ಬಂಗಾಳಕೊಲ್ಲಿಯ ಕರಾವಳಿ ಸಮೀಪಕ್ಕೆ ಬಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ತೀವ್ರತೆ ಕಡಿಮೆ ಇದೆ. ಪೂರ್ವ ಕರಾವಳಿಯಲ್ಲಿಯೇ ಚಲಿಸಲಿದೆ. ಇದರಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಹೆಚ್ಚಿನ ಮಳೆ ಆಗಲಿದೆ. ಉಳಿದಂತೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಕೆಲವು ಭಾಗದಲ್ಲಿ ಸಾಧಾರಣ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಮುಗಿದಿಲ್ಲ ಮಳೆಗಾಲ, ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಸಾಧ್ಯತೆ!

Follow Us:
Download App:
  • android
  • ios