ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಪರಿಣಾಮ ಎರಡು ಜಿಲ್ಲೆಯ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದೆ.

ಮಂಗಳೂರು (ಜು.24) ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ ಭೂಕುಸಿತ, ಗುಡ್ಡ ಕುಸಿತದ ಸಾಧ್ಯತೆಗಳ ಕುರಿತು ಎಚ್ಚರಿಕೆ ನೀಡಲಾಗಿದೆ. ನಾಳೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಪರಿಣಾಮ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ನಾಳೆ (ಜು.25) ರಜೆ ಘೋಷಿಸಲಾಗಿದೆ. ರೆಡ್ ಅಲರ್ಟೋ ಘೋಷಿಸಿರುವ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜಿಗೆ ನಾಳೆ (ಜು.25) ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಕಾಲೇಜಿಗೆ ನಾಳೆ ರಜೆ

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಸೂಚನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗೆ ನಾಳೆ (ಜು.25) ರಜೆ ಘೋಷಿಸಲಾಗಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಶಾಲೆ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರಜೆ ಘೋಷಣೆ ಮಾಡಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗೆ ರಜೆ ನೀಡಾಗಿದೆ.

ಕೊಡಗು ಜಿಲ್ಲೆಯಲ್ಲೂ ನಾಳೆ ರಜೆ

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದೆ. ಹೀಗಾಗಿ ಶುಕ್ರವಾರ (ಜು.25) ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆಯಿಂದ ಜೀಪ್ ಅಪಘಾತ

ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಭದ್ರಾ ನದಿಗೆ ಬಿದ್ದ ಘಟನೆ ನಡೆದಿದೆ. ಕಳಸ ತಾಲೂಕಿನ ಕೊಳಮಮಾಗೆ ಗ್ರಾಮದ ಬಳಿಕ ಈ ಘಟನೆ ನಡೆದಿದೆ. ಘಟನೆಯಲ್ಲಿ ಜೀಪ್ ಚಾಲಕ 23 ವರ್ಷದ ಶಮಂತ್ ಮೃತಪಟ್ಟಿದ್ದಾರೆ. ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಜೀಪ್ ನದಿಗೆ ಉರುಳಿ ಬಿದ್ದಿದೆ. ಜೀಪ್ ಸಮೇತ ಚಾಲಕ ಕೂಡ ನದಿ ಬಿದ್ದಿದ್ದಾನೆ. ತುಂಬಿ ಹರಿಯುತ್ತಿದ್ದ ನದಿಯಲ್ಲಿ ಜೀಪ್ ಹಾಗೂ ಚಾಲಕ ಕೊಚ್ಚಿ ಹೋಗಿದ್ದಾನೆ. ಪರಿಣಾಮ ಚಾಲಕ ಮೃತಪಟ್ಟಿದ್ದಾನೆ.

ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ ಜೀಪ್ ಚಾಲಕ ಶಮಂತ್, ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಾಸ್ ಹೋಗುವ ವೇಳೆ ಅವಘಡ ಸಂಭವಿಸಿದೆ. ಭಾರಿ ಮಳೆಯಿಂದ ಜೀಪ್ ಚಾಲಕನ ನಿಯಂತ್ರ ತಪ್ಪಿ ಅಪಘಾತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ದಳಗಳು ದೌಡಾಯಿಸಿದೆ. ಇತ್ತ ಮುಳುಗು ತಜ್ಞ ಮಲ್ಪೆ ಈಶ್ವರ್ ಕರೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ ಭಾರಿ ಮಳೆ ಸುರಿಯುತ್ತಿರುವ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.