Asianet Suvarna News Asianet Suvarna News

Mangaluru Omicron Cases: ದಕ್ಷಿಣ ಕನ್ನಡದಲ್ಲಿ ಏಕಾಏಕಿ 5 ಒಮಿಕ್ರಾನ್ ದೃಢ! ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ

  • ದಕ್ಷಿಣ ಕನ್ನಡದಲ್ಲಿ ಏಕಾಏಕಿ 5 ಒಮಿಕ್ರಾನ್ ಪ್ರಕರಣ ಬೆಳಕಿಗೆ
  • ಮಂಗಳೂರಿನ ನರ್ಸಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳಿಗೆ ಕೊರೊನಾ
  •  ರಾಜ್ಯದಲ್ಲಿ 14ಕ್ಕೇರಿದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ
Dakshina Kannada found new Omicron cases total number rises in  Karnataka gow
Author
Bengaluru, First Published Dec 18, 2021, 8:36 PM IST

ಮಂಗಳೂರು(ಡಿ.18): ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವರದಿಯ ಬೆನ್ನಲ್ಲೇ ಕಾಲೇಜು ಮತ್ತು ಹಾಸ್ಟೆಲ್ ಅನ್ನು  ಕಂಟೈನ್ಮೆಂಟ್​ ವಲಯ ಎಂದು ಘೋಷಿಸಲಾಗಿದೆ. ಕೊರೊನಾ ದೃಢಪಟ್ಟ 7 ಮಂದಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಜೊತೆಗೆ ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದು  ಒಟ್ಟು 5 ಪ್ರಕರಣಗಳು  ಪತ್ತೆಯಾಗಿದೆ.

ಏಕಾಏಕಿ ಕಾಣಿಸಿಕೊಂಡ ಒಮಿಕ್ರಾನ್: 
ಮಂಗಳೂರಿನಲ್ಲಿ (Mangaluru) ಇಂದು ಏಕಾಏಕಿ 5 ಒಮಿಕ್ರಾನ್ ಪ್ರಕರಣ ಬೆಳಕಿಗೆ ಬಂದಿದೆ. ಕ್ಲಸ್ಟರ್ -1 ರಲ್ಲಿ 14 ಕೊರೊನಾ ಪ್ರಕರಣ ಕಂಡುಬಂದಿತ್ತು. ಇದರಲ್ಲಿ ಜಿನೋಮಿಕ್​ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ 4 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.  ಕ್ಲಸ್ಟರ್ -2 ರಲ್ಲಿ 19 ಕೊರೊನಾ ಪ್ರಕರಣ ಕಂಡುಬಂದಿತ್ತು.  ಇದರಲ್ಲಿ ಜಿನೋಮಿಕ್​ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ 1 ಒಮಿಕ್ರಾನ್ ಪ್ರಕರಣವಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ (Sudhakar) ಟ್ವೀಟ್ ಮಾಡಿ ತಿಳಿಸಿದ್ದಾರೆ.  ಇವರ್ಯಾರಿಗೂ ವಿದೇಶ ಪ್ರಯಾಣದ ನಂಟಿಲ್ಲ ಎಂದು ತಿಳಿದುಬಂದಿದೆ. ಇನ್ನು ಯುಕೆಯಿಂದ ಬೆಂಗಳೂರಿಗೆ ಬಂದ ಓರ್ವ ವ್ಯಕ್ತಿಗೆ ಒಮಿಕ್ರಾನ್ ದೃಢವಾಗಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

 

ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಕೊರೊನಾ:
ಕಾಲೇಜಿನ ಪ್ರಥಮ ವರ್ಷದ ತರಗತಿಯ 43 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ ಏಳು ಮಂದಿಗೆ ಕೊರೊನಾ ಪಾಸಿಟಿವ್ (Covid positive)  ಎಂದು ವರದಿ ಬಂದಿದೆ. ವಿದ್ಯಾರ್ಥಿಗಳು ಕೇರಳದಿಂದ ಬಂದಿದ್ದರು ಎನ್ನಲಾಗಿದೆ. ಸದ್ಯ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿರುವ  ನರ್ಸಿಂಗ್ ಕಾಲೇಜು ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ನಿಗಾ ಇರಿಸಿದೆ. 

Omicron Variant: ಸೋಂಕಿತರಿಗೆ ತಾತ್ಕಾಲಿಕ ಆಸ್ಪತ್ರೆಯಲ್ಲಿ ಒಮಿಕ್ರೋನ್‌ ಚಿಕಿತ್ಸೆ

ಕೇರಳದಿಂದ ಬಂದ ವಿದ್ಯಾರ್ಥಿಗಳು ಬರುವಾಗ ನೆಗೆಟಿವ್ ರಿಪೋರ್ಟ್ ತಂದಿದ್ದರು. ಮಂಗಳೂರಿಗೆ ಬಂದಿದ್ದಾಗ ನಿಯಮಾಸುಸಾರವಾಗಿ ಹಾಸ್ಟೆಲ್ ನಲ್ಲಿ ಏಳು ದಿನ ಕ್ವಾರೆಂಟೈನ್ ಮಾಡಲಾಗಿತ್ತು.  ಏಳು ದಿನದ ಬಳಿಕ ಮತ್ತೆ ಟೆಸ್ಟ್ ವೇಳೆ ಪಾಸಿಟಿವ್ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿ ಕಂಟೈನ್ಮೆಂಟ್ ವಲಯವಾಗುತ್ತಿರುವ ಮೂರನೇ ನರ್ಸಿಂಗ್ ಕಾಲೇಜು ಇದಾಗಿದೆ. ಈ ಹಿಂದೆ ಎರಡು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ  ಪರಿಣಾಮ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿತ್ತು.

Covid 19 Variant: ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌?

ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಎರಡಕ್ಕಿಂತ ಹೆಚ್ಚು ಮಂದಿಗೆ ಒಂದೇ ಕಡೆ ಸೋಂಕು ಕಾಣಿಸಿಕೊಂಡರೆ ಅಂತಹ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗುತ್ತಿದೆ.

 ಕಳೆದ ಕೆಲ ದಿನಗಳ ಹಿಂದೆ ಎಂ.ವಿ. ಶೆಟ್ಟಿ ಕಾಲೇಜಿನಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಮತ್ತೊಂದು ನರ್ಸಿಂಗ್ ಕಾಲೇಜ್​ನಲ್ಲಿ ಇದೀಗ ಸೋಂಕು ಪತ್ತೆಯಾಗಿದೆ.

ಹಾಗೆ ನೋಡಿದರೆ ರಾಜ್ಯದ ಹಲವು ನರ್ಸಿಂಗ್ ಕಾಲೇಜಿನಲ್ಲಿ ಈ ಹಿಂದೆ ಕೂಡ ಕೊರೋನಾ ಪ್ರಕರಣ ಬೆಳಕಿಗೆ ಬಂದಿದೆ.  ಈ ಎಲ್ಲಾ ಕಾಲೇಜಿನಲ್ಲಿ ಪಾಸಿಟಿವ್ ಬಂದ ವಿದ್ಯಾರ್ಥಿಗಳು ಹೊರಗಡೆಯಿಂದ ಬಂದವರೇ ಆಗಿದ್ದಾರೆ. ಅದರಲ್ಲೂ ಕೇರಳದಿಂದ ಬಂದವರೇ ಹೆಚ್ಚು. 

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 335 ಜನರಿಗೆ ಸೋಂಕು ತಗುಲಿದ್ದು , ಐವರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ . ಕಳೆದ 24 ಗಂಟೆಯಲ್ಲಿ 335 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಂದು 286 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯ 7120 ಸಕ್ರಿಯ ಪ್ರಕರಣಗಳಿದೆ.

Follow Us:
Download App:
  • android
  • ios