Hamsalekha Controversy: ಹಂಸಲೇಖ ವಿರುದ್ಧ ದೂರು ನೀಡಿದ್ದವರ ಮೇಲೆ ಪ್ರತಿದೂರು

* ಸಂಗೀತ ನಿರ್ದೇಶಕ ಹಂಸಲೇಖ ಹೇಳಿಕೆಗೆ ಪರ-ವಿರೋಧ ಚರ್ಚೆ
* ಹಂಸಲೇಖ ವಿರುದ್ಧ ದೂರು ನೀಡಿದ್ದವರ ವಿರುದ್ಧ ಪ್ರತಿದೂರು
* ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣರಾಜ್​ ವಿರುದ್ಧ ದೂರು

Dalit Leader Files Case against Who Filed compliant On Hamsalekha rbj

ಬೆಂಗಳೂರು, (ನ.18): ಪೇಜಾವರ ಶ್ರೀ (Pejavara Shree) ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ವಿರುದ್ಧ ಆಕ್ರೋಶ  ವ್ಯಕ್ತವಾಗುತ್ತಿದೆ. 

ಹಂಸಲೇಖ ಅವರು ಈಗಾಗಲೇ ಕ್ಷಮೆ ಕೇಳಿದ್ದರೂ ಸಹ ವಿವಾದ (Hamsalekha Controversy) ತಣ್ಣಗಾಗುವ  ಲಕ್ಷಣಗಳು ಕಾಣುತ್ತಿಲ್ಲ.
ಇದೀಗ ಹಂಸಲೇಖ ಅವರ ವಿರುದ್ಧ ದೂರು ನೀಡಿದ್ದವರ ಮೇಲೆ ಪ್ರತಿದೂರು ದಾಖಲಾಗಿದೆ. 

ಕ್ಷಮೆ ಕೇಳಿದ್ದರೂ ಹಂಸಲೇಖ ವಿರುದ್ಧ ಬ್ರಾಹ್ಮಣ ಸಭಾ ದೂರು ದಾಖಲು

ಹೌದು... ಹಂಸಲೇಖ ವಿರುದ್ಧ ಕಮಿಷನರ್​ ಕಮಲ್​ ಪಂತ್​ಗೆ ದೂರು ನೀಡಿದ್ದ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣರಾಜ್​ ವಿರುದ್ಧ ದಲಿತ ಮುಖಂಡ ಶಿವರಾಜ್ ದೂರು ನೀಡಿದ್ದಾರೆ.

 ದಲಿತ ಮುಖಂಡ ಶಿವರಾಜ್ ಬ್ಯಾಡರಹಳ್ಳಿ ಠಾಣೆಯಲ್ಲಿ ಕೃಷ್ಞರಾಜ್ ವಿರುದ್ಧ ದೂರು ನೀಡಿದ್ದಾರೆ. ಕೃಷ್ಣರಾಜ್ ದೂರು ಕೋಮು ಗಲಭೆಗೆ ಕಾರಣ ಆಗುತ್ತೆ  ಎಂದಿದ್ಧಾರೆ. 

ಪೇಜಾವರ ಶ್ರೀಗಳ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದು ತಪ್ಪು. ಅದಕ್ಕಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಬಹಿರಂಗವಾಗಿ ಕ್ಷಮೆ ಕೇಳಬೇಕು. ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳಿರುವುದನ್ನು ಒಪ್ಪುವುದಿಲ್ಲ. ಎಲ್ಲಿ ಅಪಮಾನ ಆಗಿದ್ಯೋ ಅಲ್ಲಿಯೇ ಕ್ಷೆಮೆ ಕೇಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣರಾಜ್​ ದೂರು ನೀಡಿದ್ದರು.

ಹಂಸಲೇಖ ಅವರ ಬಗ್ಗೆ ಸಾಮಾಜಿಕ ಜಾಲತಣಗಳಲ್ಲಿ ಭಾರೀ ಚರ್ಚೆಯಾಗುತ್ತುದ್ದು, ಕೆಲವರು ಹಂಸಲೇಖ ಪರ ಬ್ಯಾಟಿಂಗ್ ಮಾಡಿದ್ರೆ, ಇನ್ನೂ ಕೆಲವರು ಅವರ ವಿರುದ್ಧ ಧ್ವನಿ ಎತ್ತಿದ್ದಾರೆ. ಇದು ಎಡ-ಬಲ ಪಂಥ ಎನ್ನುವ ಮಟ್ಟಕ್ಕೆ ತಲುಪಿದೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಂಗೀತ ದಿಗ್ಗಜ  ಹಂಸಲೇಖ (Hamsalekha) ಹೇಳಿಕೆ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru VV) ವಿದ್ಯಾರ್ಥಿಗಳು (Students) ಹಂಸಲೇಖ ಅವರನ್ನು ಬೆಂಬಲಿಸಿ ಇಂದು (ನ.18) ಪ್ರತಿಭಟನೆ (Protest) ನಡೆಸಿದ್ದಾರೆ.

ಬೆಂಗಳೂರು ಸ್ನಾತಕೋತ್ತರ ಮತ್ತು ಸಂಶೋಧನಾ ವಿಧ್ಯಾರ್ಥಿಗಳು ಸೇರಿ  ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಹಂಸಲೇಖ ಅವರಿಗೆ ಸದ್ಯ ಭದ್ರತೆ (Security) ಸಮಸ್ಯೆ ಕಾಡುತ್ತಿದೆ. ಅನೇಕ ಬೆದರಿಕೆಗಳಿದ್ದು, ಸೂಕ್ತ ಭದ್ರತೆ ನೀಡುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.   

ಪ್ರಕರಣ ಹಿನ್ನಲೆ:
 ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ‌ ಮನೆಗೆ ಹೋಗಿದ್ರು ಅಂತ ಕೇಳಿದ್ದೆ. ದಲಿತರ ಮನೆಗೆ ಬಂದು ಅವರು ಕುಳಿತುಕೊಳ್ಳಬಹುದು. ಆದ್ರೆ, ಅವರಿಗೆ ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತಾ..? ಕೋಳಿ ಬೇಡ ಕುರಿಯ ರಕ್ತವನ್ನು ಫ್ರೈ ಮಾಡಿ ಕೊಟ್ರೆ ತಿನ್ನೋಕೆ‌ ಆಗುತ್ತಾ..? ಲಿವರ್ ಕೊಟ್ರೆ ತಿನ್ನೋಕೆ ಆಗುತ್ತಾ..? ಎಂದು ಪ್ರಶ್ನಿಸಿದ್ದರು.

ಹಂಸಲೇಖ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅತೀವ ಪರ-ವಿರೋಧಗಳ ಚರ್ಚೆಯ ನಂತರ ಹಂಸಲೇಖ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೇಳಿದ್ದರು.

ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು? ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರ ಯಾವುದರ ಮೂಲಕ ಇದ್ದರೂ ಅದನ್ನು ಮಾಡಿಯೇ ಮಾಡುತ್ತೇನೆ’ ಎಂದು ಹಂಸಲೇಖ ಅವರು ವಿಡಿಯೋ ಮೂಲಕ ಹೇಳಿದ್ದರು. 

ಮೇಲುಜಾತಿ ಹಾಗೂ ಕೀಳುಜಾತಿ, ಜಾತಿ ತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವರು ಪ್ರಯೋಗಿಸಿದ್ದ ಪದಗಳು ವಿವಾದಕ್ಕೆ ಕಾರಣವಾಗಿತ್ತು. ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಆ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆದ ಬಳಿಕ ಹಂಸಲೇಖ ಕ್ಷಮೆ ಕೇಳಬೇಕು ಎಂಬ ಒತ್ತಾಯ ಜೋರಾಗಿತ್ತು.

Latest Videos
Follow Us:
Download App:
  • android
  • ios