ಅಧಿಕಾರಿಗಳ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿತವಾದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ.
ಬೆಂಗಳೂರು (ಫೆ.28): ಅಧಿಕಾರಿಗಳ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿತವಾದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ.
ಬೆಂಗಳೂರಿನ ಸಿಟಿ ಮಾರ್ಕೆಟ್ ವೃತ್ತ(City Market Circle)ದ ಅವೆನ್ಯೂ ರಸ್ತೆ(Avenue road)ಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬಿಬಿಎಂಪಿ(BBMP) ಅಧಿಕಾರಿಗಳು ದರ್ಗಾದ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗೋಡೆ ಕುಸಿತ(Dargah collapse)ವಾಗಿ ಅದರಡಿಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
Bengaluru: ನಿರ್ಮಾಣ ಹಂತ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದು ಬಾಲಕಿ ಸಾವು
ಈ ದುರ್ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ವಿಕ್ಟೋರಿಯಾ ಆಸ್ಪತ್ರೆ(Victoria Hospital)ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ಲಕ್ಷ್ಮಣ್ ಬಿ.ನಿಂಬರಗಿ(DCP Laxman B. Nimbargi) ತಿಳಿಸಿದ್ದಾರೆ.
