ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ: ಸಿದ್ದರಾಮಯ್ಯ
‘ದಸರಾ ನನ್ನ ಊರ ಹಬ್ಬ. ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆಯ ದಿನಗಳನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದರು.

ಬೆಂಗಳೂರು (ಅ.12) : ‘ದಸರಾ ನನ್ನ ಊರ ಹಬ್ಬ. ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆಯ ದಿನಗಳನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದರು.
ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದ ಆಹ್ವಾನ ಪತ್ರಿಕೆಯನ್ನು ಸಾಂಪ್ರದಾಯಿಕವಾಗಿ ಸ್ವೀಕರಿಸಿ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಇದು 6 , ಉಸ್ತುವಾರಿ ಮಂತ್ರಿಯಾಗಿ ಎಚ್‌ಸಿ ಮಹದೇವಪ್ಪ ಅವರಿಗೆ 3ನೇ ದಸರಾ
ನಾನು ಮೈಸೂರು ಜಿಲ್ಲೆಯವನಾಗಿದ್ದು ದಸರಾ ನನ್ನ ಊರಿನ ಹಬ್ಬವಾಗಿದೆ. ಚಿಕ್ಕವನಿದ್ದಾಗ ತಂದೆಯ ಹೆಗಲ ಮೇಲೆ ಕುಳಿತುಕೊಂಡು ದಸರಾ ವೀಕ್ಷಿಸುತ್ತಿದ್ದೆ. ಈ ಹಿಂದೆಯೂ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಂಡಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರಕಿದ್ದು ನನ್ನ ಸೌಭಾಗ್ಯ ಎಂದು ಸಂತಸದಿಂದ ಹೇಳಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರ ನೇತೃತ್ವದ ನಿಯೋಗವು ದಸರಾದ ಆಹ್ವಾನ ಪತ್ರಿಕೆ ನೀಡಿತು. ಅತ್ಯಂತ ಸಂತೋಷದಿಂದ ಅವರ ಆಹ್ವಾನ ಸ್ವೀಕರಿಸಿ, ಆಗಮಿಸುವುದಾಗಿ ತಿಳಿಸಿದೆ ಎಂದರು.
ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್; ಇಂದು ಮರದ ಅಂಬಾರಿ ಹೊತ್ತು ಗಾಂಭೀರ್ಯ ನಡಿಗೆ!
ಮೈಸೂರು ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತಿತರರು ನಿಯೋಗದಲ್ಲಿದ್ದರು.