Asianet Suvarna News Asianet Suvarna News

ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ; ಎಚ್‌ಡಿಕೆ ಹೇಳಿಕೆಗೆ ಬಜರಂಗದಳ ವಿಶ್ವಹಿಂದು ಪರಿಷತ್ ಸ್ವಾಗತ!

ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ಬಜರಂಗದಳ, ವಿಶ್ವಹಿಂದು ಪರಿಷತ್ ಸ್ವಾಗತಿಸಿದೆ.

Dattamala issue VHP, Bajrang Dal welcomed HD Kumaraswamy's statement rav
Author
First Published Nov 20, 2023, 12:26 PM IST

ಚಿಕ್ಕಮಗಳೂರು (ನ.20): ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ಬಜರಂಗದಳ, ವಿಶ್ವಹಿಂದು ಪರಿಷತ್ ಸ್ವಾಗತಿಸಿದೆ.

ದತ್ತಮಾಲಾ ಧಾರಣೆಯನ್ನು ಯಾಕೆ ಮಾಡಬಾರದು ಎಂಬ ಎಚ್‌ಡಿಕೆ ಹೇಳಿಕೆಗೆ ಹರ್ಷ ವ್ಯಕ್ತಪಡಿಸಿರುವ ಹಿಂದು ಮುಖಂಡರು. ಬಜರಂಗದಳ, ವಿಶ್ವಹಿಂದು ಪರಿಷತ್‌ನಿಂದ ಎಚ್ಡಿಕೆಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ವಿಶ್ವಹಿಂದು ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 17 ರಿಂದ 26 ರವರೆಗೂ ನಡೆಯುಲಿರುವ ದತ್ತಮಾಲಾ ಅಭಿಯಾನ. ಈ ಭಾರೀ ನಡೆಯುಲಿರುವ ಅಭಿಯಾನದಲ್ಲಿ ಪಾಲ್ಗೊಳ್ಳಲು ಹೆಚ್ ಡಿ ಕೆ ಆಹ್ವಾನ ?  ಸಂಘಟನೆಯ ಮುಖಂಡರು ಖದ್ದು ಹೆಚ್ ಡಿಕೆ ಯನ್ನು ಭೇಟಿಯಾಗಿ 1 ದಿನಗಳ ಕಾಲ ನಡೆಯುವ ಅಭಿಯಾನದಲ್ಲಿ ಭಾಗವಹಿಸುವಂತೆ ಕೋರಿ ಆಹ್ವಾನ ನೀಡುವ ಸಾಧ್ಯತೆ.

ಟೆಂಟಲ್ಲಿ ನೀಲಿ ಚಿತ್ರ ತೋರಿಸಿ ಜೀವನ ಮಾಡಿದವನು ಡಿಕೆಶಿ: ಎಚ್‌ಡಿಕೆ ವಾಗ್ದಾಳಿ

ಈ ಬಗ್ಗೆ ವಿಶ್ವ ಹಿಂದು ಪರಿಷತ್ ನ ಕಾರ್ಯಕಾರಣಿ ಸದಸ್ಯ ಸಕಲೇಶಪುರ ರಘು ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ. 

ಅದು ದೇವರ ಕಾರ್ಯಕ್ರಮ. ಹಾಕೋ ಸಮಯ ಬಂದ್ರೆ ದತ್ತ ಮಾಲೆ ಹಾಕ್ತೀನಿ, ದತ್ತಮಾಲೆ ಏಕೆ ಹಾಕಬಾರದು? ಕಾನೂನು ಬಾಹಿರವಾಗಿ ಅಲ್ಲ, ಆ ರೀತಿಯಲ್ಲಿ ಯಾವುದನ್ನೂ ಮಾಡಲ್ಲ, ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ. ಜಾತ್ಯತೀತತೆ ಅಂದ್ರೆ ಏನು? ಅಲ್ಲೆಲ್ಲೋ ಹೋಗಿ ನಿಮ್ಮ ಮಂತ್ರಿ ಮಾತನಾಡಿದ್ದಾರಲ್ಲ, ನಮ್ಮ ಸಮಾಜದ ಖಾದರ್ ಅವರಿಗೆ ಬಿಜೆಪಿ ಶಾಸಕರು ಕೈ ಮುಗಿಯಬೇಕು ಅಂತ, ಇದು ಜಾತ್ಯಾತೀತತೇನಾ? ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆಯೇ ಎಂದು ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿದ್ದರು. 

ಪ್ರಿಯಾಂಕ್‌ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಗ ಮಣಿಕಂಠ ಮೇಲೆ ಹಲ್ಲೆ

Follow Us:
Download App:
  • android
  • ios