ದತ್ತಪೀಠ ಅಭಿಯಾನ: ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಬರುವ ಪ್ರವಾಸಿಗರಿಗೆ 3 ದಿನ ನಿಷೇಧ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು (ಅ.27): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ಅ.30 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ. ನವೆಂಬರ್ 4 ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವೇಶ ನಿಷೇಧಿಸಲಾಗಿದೆ.
ದತ್ತಪೀಠವನ್ನ ಬೇಲಿ ರಹಿತ ಮಾಡುವುದೇ ನಮ್ಮ ಸಂಕಲ್ಪ: ಶೋಭಾ ಕರಂದ್ಲಾಜೆ
ನವೆಂಬರ್ ಮೊದಲ ವಾರದ ವೀಕೆಂಡ್ ಕಾಫಿನಾಡ ಮುಳ್ಳಯ್ಯನಗಿರಿ ಭಾಗಕ್ಕೆ ನಿರ್ಬಂಧ. ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿರುವ ಹಿನ್ನೆಲೆ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರೋ ಡಿಸಿ-ಎಸ್ಪಿ.
ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸಲಿದ್ದಾರೆ. ಅದೇ ದಿನ ಚಿಕ್ಕಮಗಳೂರಿನ ಶಂಕರಮಠದ ಮಾಲಾಧಾರಣೆ ನಡೆಯಲಿದೆ. ನ.2 ರಂದು ದತ್ತ ದೀಪೋತ್ಸವ, ನ.4 ರಂದು ಪಡಿ ಸಂಗ್ರಹ ಮಾಡಲಾಗುವುದು ಎಂದು ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.
ಮತ್ತೆ ಮುನ್ನೆಲೆಗೆ ಬಂದ ದತ್ತಪೀಠ ವಿವಾದ: ವ್ಯವಸ್ಥಾಪನ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ನ.5 ರಂದು ಶೋಭಾಯಾತ್ರೆ ನಡೆಯಲಿದೆ. ಬಳಿಕ ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದ ನಂತರ ಹೋಮ ಹವನ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಹೇಳಿದ್ದಾರೆ.