Asianet Suvarna News Asianet Suvarna News

ಕನ್ನಡಿಗರು-ತಮಿಳರನ್ನು ಬೆಸೆದವರು ಸರ್ವಜ್ಞ, ತಿರುವಳ್ಳುವರ್‌: ಡಿಸಿಎಂ ಅಶ್ವತ್ಥನಾರಾಯಣ

ಕನ್ನಡ ಮತ್ತು ತಮಿಳು ಭಾಷಿಗರ ಐಕ್ಯತೆಯ ದಿನ ಆಚರಣೆ| ಅನೇಕ ವರ್ಷಗಳಿಂದ ಜಟಿಲವಾಗಿದ್ದ ಸಮಸ್ಯೆಯನ್ನು ಹನ್ನೊಂದು ವರ್ಷಗಳ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಪರಿಹಾರ| ಬೆಂಗಳೂರಿನಲ್ಲಿ ತಿರುವಳ್ಳುವರ್‌ ಪ್ರತಿಮೆ ಅನಾವರಣ| ಅಂದೇ ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆ ಸ್ಥಾಪನೆ| ಎರಡು ರಾಜ್ಯಗಳ ನಡುವೆ ಇದೊಂದು ಐತಿಹಾಸಿಕ ಘಟನೆ|

Day of Unity of Kannada and Tamil Language Held in Bengaluru
Author
Bengaluru, First Published Aug 10, 2020, 8:10 AM IST | Last Updated Aug 10, 2020, 8:10 AM IST

ಬೆಂಗಳೂರು(ಆ.10): ತಮಿಳಿನ ಸಂತ ಕವಿ ತಿರುವಳ್ಳುವರ್‌ ಹಾಗೂ ಕನ್ನಡದ ಸರ್ವಶ್ರೇಷ್ಠ ವಚನಕಾರ ಸರ್ವಜ್ಞರು ಕನ್ನಡ ಮತ್ತು ತಮಿಳಿಗರನ್ನು ಬೆಸೆದಿದ್ದು ಮಾತ್ರವಲ್ಲದೆ ಸಮಾಜ ಸುಧಾರಣೆಗೆ ಅನುಪಮ ಕೊಡುಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ ಹಲಸೂರಲ್ಲಿ ತಿರುವಳ್ಳುವರ್‌ ಪ್ರತಿಮೆ ಸ್ಥಾಪನೆಯಾಗಿ 11 ವರ್ಷಗಳು ಸಂದ ಹಿನ್ನೆಲೆಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ‘ಕನ್ನಡ ಮತ್ತು ತಮಿಳು ಭಾಷಿಗರ ಐಕ್ಯತೆಯ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.
ಅನೇಕ ವರ್ಷಗಳಿಂದ ಜಟಿಲವಾಗಿದ್ದ ಈ ಸಮಸ್ಯೆಯನ್ನು ಹನ್ನೊಂದು ವರ್ಷಗಳ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಪರಿಹರಿಸಲಾಯಿತು. ಬೆಂಗಳೂರಿನಲ್ಲಿ ತಿರುವಳ್ಳುವರ್‌ ಪ್ರತಿಮೆ ಅನಾವರಣಗೊಂಡಿತು. ಅಂದೇ ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆ ಸ್ಥಾಪನೆಯಾಯಿತು. ಎರಡು ರಾಜ್ಯಗಳ ನಡುವೆ ಇದೊಂದು ಐತಿಹಾಸಿಕ ಘಟನೆಯಾಯಿತು ಎಂದರು.

ಅದಮಾರು ಕಿರಿಯ ಶ್ರೀ ಈಶಪ್ರಿಯರಿಂದ ಸರ್ವಜ್ಞ ಪೀಠಾರೋಹಣ

ತಮ್ಮ ಸಾಹಿತ್ಯ, ಬರವಣಿಗೆ ಹಾಗೂ ತತ್ವಾದರ್ಶಗಳ ಮೂಲಕ ಸಮಾನತೆಯನ್ನು ಸಾರಿದ ತಿರುವಳ್ಳುವರ್‌ ಅವರ ತಿರುಕ್ಕುರಳ್‌ ಕೃತಿ ಅತ್ಯಂತ ಮಹತ್ವದ್ದಾಗಿದೆ. ಅದರ ಸಾರ ಎಲ್ಲರಿಗೂ ಎಲ್ಲ ಕಾಲಕ್ಕೂ ಅನುಕರಣೀಯವಾಗಿದೆ. ಅವರು ಬರೆದಿದ್ದೆಲ್ಲವೂ ನಮ್ಮ ಜೀವನಕ್ಕೆ ಹತ್ತಿರವಾಗಿದೆ. ಸರ್ವಜ್ಞರು ಮತ್ತು ತಿರುವಳ್ಳುವರ್‌ ಭಾಷೆ, ಗಡಿ ಮೀರಿದ ತತ್ವಜ್ಞಾನಿಗಳು. ಜನರ ನಡುವೆಯೇ ಇದ್ದು ಸಮಾಜವನ್ನು ತಿದ್ದಿದರು. ಅವರಿಬ್ಬರು ಬಿಟ್ಚುಹೋದ ಜ್ಞಾನದ ಬೆಳಕು ಎಲ್ಲೆಡೆ ಅನನ್ಯವಾಗಿ ಪಸರಿಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತಮಿಳು ಸಂಘದ ಪದಾಧಿಕಾರಿಗಳು, ಐಕ್ಯತಾ ಸಮಿತಿ ಸದಸ್ಯರು ಹಾಜರಿದ್ದರು.

Latest Videos
Follow Us:
Download App:
  • android
  • ios