ಬೆಂಗಳೂರು(ಸೆ.11): ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುಧಾರಣಾ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಕಾಂಕ್ರಿಟ್‌ ಕಾಡಾಗಿದ್ದು ಸ್ವಲ್ಪ ಮಳೆ ಬಂದರೂ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ, ಅಲ್ಲಲ್ಲಿ ಮಳೆ ನೀರು ಇಂಗು ಗುಂಡಿಗಳ ರಚನೆಗೆ ಒತ್ತು ನೀಡಬೇಕು. ರಾಜಕಾಲುವೆಯಲ್ಲಿ ನೀರು ಹರಿಯುವ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ. ಎಷ್ಟೇ ಮಳೆ ಬಂದರೂ ಪ್ರವಾಹ ಉಂಟಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

ಈಗಾಗಲೇ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಉಳಿದಿರುವ ಕಡೆಗಳಲ್ಲಿ ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.