Asianet Suvarna News Asianet Suvarna News

ನಾಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಆನೇಕಲ್‌ನಲ್ಲಿ ಜನತಾದರ್ಶನ

ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯಮಟ್ಟದಲ್ಲೇ ಪರಿಹರಿಸುವ ಉದ್ದೇಶದಿಂದ ನಾಳೆ(ಸೆ.25)  ಡಿಸಿಎಂ ಡಿಕೆ ಶಿವಕುಮಾರ ನೇತೃತ್ವದಲ್ಲಿ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

DCM  DK Shivakumar Janatadarshan in anekal at bengaluru rav
Author
First Published Sep 24, 2023, 8:54 PM IST

ಬೆಂಗಳೂರು (ಸೆ.24) ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯಮಟ್ಟದಲ್ಲೇ ಪರಿಹರಿಸುವ ಉದ್ದೇಶದಿಂದ ನಾಳೆ(ಸೆ.25)  ಡಿಸಿಎಂ ಡಿಕೆ ಶಿವಕುಮಾರ ನೇತೃತ್ವದಲ್ಲಿ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ನಾಳೆ ಮಧ್ಯಾಹ್ನ 3.00 ಗಂಟೆಗೆ ಆನೇಕಲ್ ತಾಲೂಕಿನ ಅತ್ತಿಬೆಲೆ ಹೋಬಳಿಯ ಸೂರ್ಯ ನಗರ, ರಂಗ ಮಂದಿರ ಮೊದಲನೇ ಹಂತ, ಕೆಎಚ್‌ಬಿ, ಸುರಾನ ಕಾಲೇಜು ಆವರಣದಲ್ಲಿ ಡಿಕೆಶಿ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ. ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇತೃತ್ವದಲ್ಲಿ ನಾಳೆ ಜನತಾ ದರ್ಶನ ನಡೆಯಲಿದೆ.

ಮೈತ್ರಿ ಗಟ್ಟಿಗೊಳಿಸಲು ತಮಿಳುನಾಡಿಗೆ ಕಾವೇರಿ ನೀರು ಹರಿಬಿಟ್ಟ ಕಾಂಗ್ರೆಸ್‌ : ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸಿಎಂ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾದರ್ಶನ ನಡೆಯಲಿದ್ದು, ಸಾರ್ವಜನಿಕರು ಸಮಸ್ಯೆಗಳನ್ನು ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿನ ತನಕ ಬರೋದು ಬೇಡ‌‌. ಅದರ ಬದಲು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖ ಜನತಾ ದರ್ಶನ ಮಾಡಿ ಜಿಲ್ಲಾಧಿಕಾರಿಗಳ ಜೊತೆಗೂಡಿ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾದರ್ಶನ ನಡೆಯಲಿದೆ. ಅಲ್ಲದೆ ಪ್ರತಿ 15 ದಿನಗಳಿಗೊಮ್ಮೆ ಒಂದು ತಾಲ್ಲೂಕು  ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು ಜನತಾದರ್ಶನಕ್ಕೆ ಸೂಚನೆ ನೀಡಲಾಗಿದೆ.

Follow Us:
Download App:
  • android
  • ios