ಪೆನ್ ಡ್ರೈವ್ ಕೇಸಲ್ಲಿ ಎಚ್ಚಿಕೆ ಹೋರಾಡಲಿ: ಡಿ.ಕೆ.ಶಿವಕುಮಾರ್
ಕುಮಾರಸ್ವಾಮಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ. ಅವರು ಹೋರಾಟಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಬಗ್ಗೆ ವಿಸ್ತಾರವಾಗಿ ಮಾತನಾಡುತ್ತೇನೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್
ಬೆಂಗಳೂರು(ಮೇ.10): 'ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು? ಅವರು ಹೋರಾಟ ಮಾಡಲಿ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ. ಅವರು ಹೋರಾಟಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಬಗ್ಗೆ ವಿಸ್ತಾರವಾಗಿ ಮಾತನಾಡುತ್ತೇನೆ ಎಂದು ಹೇಳಿದರು.
ತಪ್ಪು ಮಾಡಿದ್ದು ಪ್ರಜ್ವಲ್ ರೇವಣ್ಣ, ಡಿಕೆಶಿ ವಿರುದ್ಧ ಪ್ರತಿಭಟನೆ ಯಾಕೆ? ಎಚ್‌ಡಿಕೆ ವಿರುದ್ಧ ಚಲುವರಾಯಸ್ವಾಮಿ ಕಿಡಿ
ಉಳಿದದ್ದೆಲ್ಲ ವಿಧಾನಸಭೆಯಲ್ಲಿ ಚರ್ಚೆ:
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, 'ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಉಳಿದಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ' ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.