ಅಶೋಕ್ ಮೊದಲು ಪ್ರಧಾನಿ ಮೋದಿ ಹಾಗೂ ಅವರ ಪಕ್ಷದ ಇತರೆ ನಾಯಕರು ಭಾಗವಹಿಸುತ್ತಿರುವುದನ್ನು ಪ್ರಶ್ನಿಸಲಿ. ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ. ನಾನು ಹೋಗುತ್ತೇನೋ, ಬಿಡುತ್ತೇನೋ ನನಗೆ ಬಿಟ್ಟ ವಿಚಾರ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ 

ಬೆಂಗಳೂರು(ಫೆ.06): ನಾನು ಕುಂಭಮೇಳದಲ್ಲಿ ಭಾಗವಹಿಸುವ ಕುರಿತು ಟೀಕೆ ಮಾಡುತ್ತಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂಭಮೇಳದಲ್ಲಿ ಭಾಗ ಹಿಸುತ್ತಿರುವುದನ್ನು ಪ್ರಶ್ನಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ತಿರುಗೇಟು ನೀಡಿದ್ದಾರೆ.

ತಾವು ಕುಂಭಮೇಳದಲ್ಲಿ ಭಾಗವಹಿಸುವುದಾಗಿ ಹೇಳಿರುವುದನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಾತೆಯಲ್ಲಿ ಟೀಕಿಸಿದ್ದಾರಲ್ವಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಅಶೋಕ್ ಮೊದಲು ಪ್ರಧಾನಿ ಮೋದಿ ಹಾಗೂ ಅವರ ಪಕ್ಷದ ಇತರೆ ನಾಯಕರು ಭಾಗವಹಿಸುತ್ತಿರುವುದನ್ನು ಪ್ರಶ್ನಿಸಲಿ. ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ. ನಾನು ಹೋಗುತ್ತೇನೋ, ಬಿಡುತ್ತೇನೋ ನನಗೆ ಬಿಟ್ಟ ವಿಚಾರ ಎಂದರು. 

ಬೌದ್ಧ ಮಹಾಕುಂಭ ಯಾತ್ರೆಯನ್ನು ಉದ್ಘಾಟಿಸಿದ ಸಿಎಂ ಯೋಗಿ ಆದಿತ್ಯನಾಥ್

ಕುಂಭಮೇಳದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಹೇಳಿರುವುದೇ ಬೇರೆ ಅರ್ಥದಲ್ಲಿ. ಯಾವುದೇ ಧರ್ಮದ ಬಗ್ಗೆ ಶ್ರದ್ಧೆ, ಭಕ್ತಿ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ್ದು, ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ, ಇಂತಹ ವಿಚಾರಗಳನ್ನೂ ಬಿಜೆಪಿಯ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದರು.