ಬೆಂಗಳೂರು(ಡಿ.20): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸ್ ದೌರ್ಜನ್ಯಕ್ಕೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

"

ಅದರಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ಮಧ್ಯೆ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾಕಾರರ ಮಧ್ಯೆ ನಿಂತು ರಾಷ್ಟ್ರಗೀತೆ ಹಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. 

ಮಂಗಳೂರಿನಲ್ಲಿ ಆರದ ಪೌರತ್ವ ಕಾಯ್ದೆಯ ಕಿಚ್ಚು: ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಪುರಭವನದ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಅಲ್ಲದೇ ಸ್ಥಳದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನಾಕಾರರ ಮನಗೆದ್ದರು.

ಸಮಾಜ ವಿರೋಧಿ ಶಕ್ತಿಗಳು ನಿಮ್ಮ ನ್ಯಾಯಯು ಪ್ರತಿಭಟನೆಯನ್ನು ಹೈಜಾಕ್ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟು ಶಾಂತಿ ಕಾಪಾಡುವಂತೆ ರಾಥೋಡ್ ಮನವಿ ಮಾಡಿದ್ದಾರೆ. ರಾಥೋಡ್ ಮಾಡಿದ ಮನವಿಗೆ ಪ್ರತಿಭಟನಾಕಾರರು ಧರಣಿ ಕೈಬಿಟ್ಟು ಸ್ಥಳದಿಂದ ತೆರಳಿದ್ದು ಕೂಡ ವಿಶೇಷವಾಗಿತ್ತು. 

ಪೌರತ್ವ ಕಾಯ್ದೆ: ಯುಎನ್ ಜನಾಭಿಪ್ರಾಯ ಸಂಗ್ರಹಕ್ಕೆ ಮಮತಾ ಆಗ್ರಹ!

ಚೇತನ್ ಸಿಂಗ್ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿರುವ ಹಾಗೂ ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಡಿಸೆಂಬರ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ