ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ: ಜನವರಿಯಿಂದ ಪೂರ್ವಾನ್ವಯ

ರಾಜ್ಯದಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸರ್ಕಾರಿ ನೌಕರರಿಗೆ ಶೇ.4 ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಭರ್ಜರಿ ಕೊಡುಗೆಯನ್ನು ನಿಡಿದೆ.

Dearness Allowance hiked for Karnataka government employees sat

ಬೆಂಗಳೂರು (ಮೇ 30): ರಾಜ್ಯದಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸರ್ಕಾರಿ ನೌಕರರಿಗೆ ಶೇ.4 ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಭರ್ಜರಿ ಕೊಡುಗೆಯನ್ನು ನಿಡಿದೆ. ಇನ್ನು ಈ ತುಟ್ಟಿಭತ್ಯೆ ಹೆಚ್ಚಳವು 2023 ಜನವರಿ 1 ರಿಂದ ಪೂರ್ವಾನ್ವಯ ಆಗುವಂತೆ ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಭರ್ಜರಿ ಗಿಫ್ಟ್‌ ಕೊಟ್ಟಿದ್ದಾರೆ. ಸರ್ಕಾರಿ ನೌಕರರ ಬೇಡಿಕೆಯಾಗಿದ್ದ ಬಹುದಿನಗಳ ವೇತನ ಹೆಚ್ಚಳದ ಬೇಡಿಕೆಯನ್ನು ಬಿಜೆಪಿ ಸರ್ಕಾರ ಹೆಚ್ಚಳ ಮಾಡಿತ್ತು. ಆದರೆ, ಇತ್ತೀಚೆಗೆ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರವೂ ಕೂಡ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಯನ್ನು ನೀಡಿದೆ.

ಸರ್ಕಾರಿ ನೌಕರರು ಆಯ್ತು, ರೈತರಿಗೆ ಗುಡ್‌ ನ್ಯೂಸ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ: ಅಮೃತ ಮಳಿಗೆ ಆರಂಭ

ಜನವರಿಯಿಂದಲೇ ಪೂರ್ವಾನ್ವಯ: ರಾಜ್ಯ ಸರ್ಕಾರಿ ನೌಕರರಿಗೆ ಈ ಹಿಂದೆ ಶೇ. 31 ತುಟ್ಟಿ ಭತ್ಯೆಯನ್ನು ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಆದೇಶದಲ್ಲಿ ಶೇ.31ರಿಂದ ಶೇ.35 ಗೆ ಹೆಚ್ಚಿಸಿದೆ. ಇನ್ನು ತುಟ್ಟಿ ಭತ್ಯೆ ಹೆಚ್ಚಳವು 2023ರ ಜನವರಿ  1ನೇ ತಾರೀಖಿನಿಂದ ಪೂರ್ವಾನ್ವಯ ಆಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರದ ಆದೇಶದಲ್ಲಿ ಏನಿದೆ? 
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ. 

ಮೂಲ ವೇತನಕ್ಕೆ ಮಾತ್ರ ಅನ್ವಯ: ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ" ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,  (ಆ)- 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವ್ಯಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ, (ಇ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮುಖ್ಯವಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ, ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಜನವರಿಯಿಂದಲೇ ಪೂರ್ವಾನ್ವಯ ಜಾರಿ:  ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 31 ರಿಂದ ಶೇಕಡ 35 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.

ಕಳ್ಳರು ಕದ್ದೊಯ್ದ ಹಣದ ಪೆಟ್ಟಿಗೆ ಕ್ಷಣಾರ್ಧದಲ್ಲಿ ಪತ್ತೆ ಮಾಡಿದ ಪೊಲೀಸ್‌ ಶ್ವಾನ ರೂಬಿ

ತುಟ್ಟಿಭತ್ಯೆಗೆ ಷರತ್ತುಗಳು ಅನ್ವಯ: 

  • ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
  •  ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
  • ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ, ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ 'ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅದೇಶಗಳನ್ನು ಹೊರಡಿಸಲಾಗುವುದು.
  • ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. 
  • ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮ ಇರುವ ಭಿನ್ನಾಂಶಗಳನ್ನು ಕಡೆಗಣಿಸತಕ್ಕದ್ದು.
  • ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2023ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
  •  ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.
Latest Videos
Follow Us:
Download App:
  • android
  • ios