Asianet Suvarna News Asianet Suvarna News

ಮೊದಲ ಸಭೆಯಲ್ಲೇ ಸಿಹಿ ಸುದ್ದಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

* ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ಪ್ರೋತ್ಸಾಹ ಧನ ಹೆಚ್ಚಳ
 * 1.75 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನ
* ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

decide SC Community House Scheme amount increase Rs 1.75 lakh to 5 Says Kota Srinivas Poojary
Author
Bengaluru, First Published Aug 9, 2021, 9:34 PM IST

ಬೆಂಗಳೂರು, (ಆ.09):ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿದರು. ಈ ಫಸ್ಟ್ ಮೀಟಿಂಗ್‌ನಲ್ಲೇ ಪರಿಶಿಷ್ಟ ಜಾತಿಯವರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹೌದು.. ಇಂದು (ಸೋಮವಾರ) ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಥಮ ಸಭೆ ನಡೆಸಿ ನಂತರ ಮಾಧ್ಯಮಗಳೊಂದಗಿಎ ಮಾತನಾಡಿದ ಅವರು,   ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನವನ್ನು 1.75 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

2020-21ರ SSLC ಫಲಿತಾಂಶ ಪ್ರಕಟ, ಬ್ರಿಟಿಷ್ ಹೈಕಮಿಷನರಿಗೆ ಕನ್ನಡ ಪಾಠ; ಆ.9ರ ಟಾಪ್ 10 ಸುದ್ದಿ!

 ರಾಜ್ಯದಲ್ಲಿ 1 ಕೋಟಿ 20 ಲಕ್ಷ ಪರಿಶಿಷ್ಟ ಸಮಾಜ ಇದೆ. ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಲಿಕ್ಕೆ 1 ಲಕ್ಷದ 75 ಸಾವಿರ ರೂಪಾಯಿ ಮಾತ್ರ ನೀಡಲಾಗುತ್ತಿದೆ. ಹೀಗಾಗಿ ಮನೆ ನಿರ್ಮಿಸಲು ಆರ್ಥಿಕವಾಗಿ ತುಂಬಾ ಕಷ್ಟ ಇದೆ. ಎಲ್ಲ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್‌ ಕಲ್ಪಿಸುವ ವ್ಯವಸ್ಥೆ ಆಗಬೇಕು. ಅಲ್ಲದೆ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತೆ ಆರೋಗ್ಯ ಇರಬೇಕು. ಈ ಕಾರಣಕ್ಕೆ ಅವರಿಗೆ ಕೊಡಬೇಕಿರುವ ಮನೆಗಳನ್ನು 5 ಲಕ್ಷಕ್ಕೆ ಏರಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಿಎಂ ಹಾಗೂ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದು ಹೇಳಿದರು.

ಇನ್ನು ಇಲಾಖೆಯಲ್ಲಿ ಒಂದು ವರ್ಷಗಳ ಕಾಲ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Follow Us:
Download App:
  • android
  • ios