Asianet Suvarna News Asianet Suvarna News

100 ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಪ್ರಾಯೋಗಿಕ ಬೋಧನೆಗೆ ನಿರ್ಧಾರ : ಸಚಿವ ಕೃಷ್ಣಬೈರೇಗೌಡ

ರಾಜ್ಯದ 100 ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Decision for practical teaching of Kannada  English Science Mathematics in 100 madrasas says krishnabyregowda rav
Author
First Published Dec 7, 2023, 6:57 AM IST

ವಿಧಾನ ಪರಿಷತ್‌ (ಡಿ.7) :  ರಾಜ್ಯದ 100 ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ, ಗಣಿತ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಜೆಡಿಎಸ್‌ ಸದಸ್ಯ ಬಿ.ಎಂ.ಫಾರೂಖ್‌ ಅವರ ಪ್ರಶ್ನೆಗೆ ವಕ್ಫ್‌ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಪರವಾಗಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ಫ್‌ ಆಸ್ತಿಗಳಲ್ಲಿ ಹಾಗೂ ವಕ್ಫ್‌ ಸಂಸ್ಥೆಗಳು ನಡೆಸುತ್ತಿರುವ ಮದರಸಾಗಳಲ್ಲಿ ಕಲಿಯುತ್ತಿರುವ ಮಕ್ಕಳು ಕೇವಲ ಧಾರ್ಮಿಕ ವಿಷಯಗಳನ್ನು ಕಲಿಯುವುದರಿಂದ ಅವರು ಸಮಾಜದ ಮುಖ್ಯವಾಹಿನಿಯಿಂದ ವಿಮುಖರಾಗುತ್ತಾರೆ ಎಂಬ ಕಾರಣದಿಂದ ಸದ್ಯ 100 ಮದರಸಾಗಳಲ್ಲಿ ಇತರ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ. ಎರಡು ವರ್ಷಗಳ ಕಾಲ ಬೋಧಿಸಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಮತ್ತು ಪದವಿಯನ್ನು ರಾಜ್ಯ/ ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ/ ದೂರ ಶಿಕ್ಷಣದ ಮೂಲಕ ಕೈಗೊಳ್ಳಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಕುರಿತು ಕ್ರಿಯಾಯೋಜನೆ ತಯಾರಿಸಲಾಗುತ್ತಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದ 4 ವರ್ಷ ಬೆಂಗ್ಳೂರಿನಗುಂಡಿ ಮುಚ್ಚಲಾಗಲಿಲ್ಲ: ಸಿಎಂ ತಿರುಗೇಟು

Follow Us:
Download App:
  • android
  • ios