ಕರ್ನಾಟಕದಲ್ಲಿ ಏಡ್ಸ್ ಸೋಂಕು ಇಳಿಕೆ: ಸಚಿವ ದಿನೇಶ್ ಗುಂಡೂರಾವ್
ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನ ಅಕ್ಟೋಬರ್‌ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್‌ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿ ಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆ ಲ್ಲರೂ ಕೆಲಸ ಮಾಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು(ಡಿ.03): ರಾಜ್ಯದಲ್ಲಿ ಏಡ್ಸ್ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. 2014ರಲ್ಲಿ ಒಟ್ಟಾರೆ ತಪಾಸಣೆಯ ಶೇ.1.77ರಷ್ಟು ಇದ್ದ ಸೋಂಕಿನ ಪ್ರಮಾಣ, 2024-25ರಲ್ಲಿ ಶೇ.0.33ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಏಡ್ಸ್ ಪ್ರಿವೆನ್ನನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನ ಅಕ್ಟೋಬರ್‌ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್‌ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿ ಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆ ಲ್ಲರೂ ಕೆಲಸ ಮಾಡಬೇಕು ಎಂದರು.
ಜಸ್ಟೀಸ್ ಡಿಕುನ್ಹಾ ವರದಿಯಲ್ಲಿ ಕೋವಿಡ್ ಅಕ್ರಮ ಸ್ಪಷ್ಟ ಉಲ್ಲೇಖ: ಸಚಿವ ದಿನೇಶ್ ಗುಂಡೂರಾವ್
ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ ಅವರನ್ನು ಮಾನವೀಯತೆ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ಸಚಿವರು ಹೇಳಿದರು.
ಸರ್ಕಾರದ ಪ್ರಧಾನ ಕಾರ್ಯದಶಿ ಹರ್ಷ ಗುಪ್ತ ಸೇರಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: ಆಸ್ಪತ್ರೆಗಳಲ್ಲಿ 'ರಿಂಗರ್' ಗ್ಲುಕೋಸ್ ಬಳಕೆಗೆ ಬ್ರೇಕ್
ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾಜ್ಯಾ ದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್‌ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವಿ ದ್ರಾವಣದಿಂದಲೇ ಸಾವು ಸಂಭವಿಸಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕೈಗೊಳ್ಳಲಾಗಿದೆ. ಅನಾಹುತಕ್ಕೆ ದ್ರಾವಣ ಕಾರಣವೇ ಎಂಬ ಬಗ್ಗೆ ಅನರೋಬಿಕ್ ಟೆಸ್ಟ್ ವರದಿ ಬಳಿಕ ಸ್ಪಷ್ಟತೆ ಸಿಗಲಿದೆ. ಮುಂದಿನ ವಾರ ವರದಿ ಬರಬಹುದು ಎಂದಿದ್ದರು.
108 ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ಸಚಿವ ದಿನೇಶ್ ಗುಂಡೂರಾವ್
ರಿಂಗರ್‌ಲ್ಯಾಕ್ಟೇಟ್ ಗ್ಲುಕೋಸ್ ಅನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡಲಾಗುತ್ತಿತ್ತು. ಎಂದಿನಂತೆ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್‌ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್‌ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು ಎಂದು ತಿಳಿಸಿದ್ದರು.
ಆದರೂ ಘಟನೆ ಹೇಗೆ ನಡೆಯಿತು ಎಂಬ ಪ್ರಶ್ನೆಗೆ, ಆ ಬಳಿಕ ಕಂಪನಿಯವರು ಹೈಕೋಟ್ ಕ್ರಮರ್ ನಿಂದ ಆದೇಶ ಪಡೆದ ಹಿನ್ನೆಲೆ ಡ್ರಗ್ ಲ್ಯಾಬೋರೇಟರಿಯಲ್ಲಿ ಪರೀಕ್ಷೆ ನಡೆಸಲಾಯಿತು. ಈ ವೇಳೆ ದ್ರಾವಣ ಬಳಸಬಹುದು ಎಂಬ ವರದಿ ಬಂತು. ಸಿ.ಡಿ.ಎಲ್. ವರದಿ ಆಧಾರದ ಮೇಲೆ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಮತ್ತೊಮ್ಮೆ ಪರೀಕ್ಷಿಸಿ ಸ್ಟಾಂಡರ್ಡ್ ಕ್ವಾಲಿಟಿಯ ಕೆಲವು ಬ್ಯಾಚ್‌ಗಳ ದ್ರಾವಣವನ್ನು ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ತಿಮ ವರದಿ ಬಳಿಕವಷ ಖ ಹೀಗಾಗಿ ಅಂತಿಮ ವರದಿ ಬಳಿಕವಷ್ಟೇ ಖಚಿತ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದರು.