ಆರು ತಿಂಗಳ ನಂತರ ಕೊರೋನಾ ಸೋಂಕಿನ ಪ್ರಕರಣಗಳು ಅತ್ಯಂತ ಕಡಿಮೆಯಲ್ಲಿ ದಾಖಲು
ಬೆಂಗಳೂರು(ಡಿ.29): ನಗರದಲ್ಲಿ ಆರು ತಿಂಗಳ ನಂತರ ಕೊರೋನಾ ಸೋಂಕಿನ ಪ್ರಕರಣಗಳು ಅತ್ಯಂತ ಕಡಿಮೆಯಲ್ಲಿ ದಾಖಲಾಗಿದೆ. ಸೋಮವಾರ 309 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 654 ಮಂದಿ ಗುಣಮುಖರಾಗಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.
ಜೂ.27ರಂದು 596 ಪ್ರಕರಣ ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಸಾವಿರ ದಾಟಿತ್ತು. ನಂತರ ಡಿ.21 ರಂದು 363 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರದ ಅತಿ ಕಡಿಮೆ ಸೋಂಕಿನ ಪ್ರಕರಣ ಸೋಮವಾರ ದಾಖಲಾಗಿದೆ.
ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ್ದು ಒಂದೆರಡು ಲಕ್ಷವಲ್ಲ, ಭರ್ತಿ 98 ಲಕ್ಷ
ಈ ಮೂಲಕ ಈವರೆಗಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 3,86,908 ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 3,74,378 ತಲುಪಿದೆ. ಐದು ಮಂದಿ ಮೃತಪಟ್ಟಿದ್ದು, ಈವರೆಗೆ 4,304 ಜನರು ಸಾವಿಗೀಡಾಗಿದ್ದಾರೆ.
ಸಕ್ರಿಯ ಸೋಂಕಿತರ ಸಂಖ್ಯೆ 8,225 ಇಳಿಕೆಯಾಗಿದ್ದು, ಈ ಪೈಕಿ ಗಂಭೀರ ಸ್ಥಿತಿಯಲ್ಲಿರುವ 93 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 29, 2020, 7:45 AM IST