ಸೇತುವೆ ಕುಸಿತಕ್ಕೆ ದೋಷಪೂರಿತ ಡಿಪಿಆರ್ ಕಾರಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಡಿಪಿಆರ್ ಸಿದ್ಧಪಡಿಸುವಾಗ ವಿನ್ಯಾಸ, ಬಳಸಬೇಕಿರುವ ಸಾಮಗ್ರಿಗಳ ಗುಣಮಟ್ಟ ನಿರ್ಧಾರಣೆ, ವಿನ್ಯಾಸ ಪರಿಷ್ಕರಣೆ, ಯೋಜನಾ ವೆಚ್ಚ ಸೇರಿದಂತೆ ವಿವಿಧ ಹಂತಗಳಲ್ಲಿ ಲೋಪಗಳಾಗಿವೆ. ಸೇತುವೆಗಳು ಕುಸಿದಿರುವುದಕ್ಕೆ ಸಿದ್ದಪಡಿಸಿದವರನ್ನು ಇದನ್ನೆಲ್ಲ ಹೊಣೆ ಮಾಡಬೇಕಾಗುತ್ತದೆ ಎಂದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ 

Defective DPR is the cause of bridge collapse in India Says Union Minister Nitin Gadkari grg

ಬೆಂಗಳೂರು(ಸೆ.27):  ದೋಷಪೂರಿತ ವಿಸ್ತ್ರತ ಯೋಜನಾ ವರದಿಗಳಿಂದ(ಡಿಪಿಆರ್) ದೇಶದ ನಾನಾ ಕಡೆ ಸೇತುವೆಗಳು ಕುಸಿದಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 
ರಾಜ್ಯ ಲೋಕೋಪಯೋಗಿ ಇಲಾಖೆ, ಇಂಡಿಯನ್ ರೋಡ್ ಕಾಂಗ್ರೆಸ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಗರದಲ್ಲಿ ಜಂಟಿಯಾಗಿ ಆಯೋಜಿಸಿರುವ ಸೇತುವೆ ಸುರಕ್ಷತೆ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. 

ಡಿಪಿಆರ್ ಸಿದ್ಧಪಡಿಸುವಾಗ ವಿನ್ಯಾಸ, ಬಳಸಬೇಕಿರುವ ಸಾಮಗ್ರಿಗಳ ಗುಣಮಟ್ಟ ನಿರ್ಧಾರಣೆ, ವಿನ್ಯಾಸ ಪರಿಷ್ಕರಣೆ, ಯೋಜನಾ ವೆಚ್ಚ ಸೇರಿದಂತೆ ವಿವಿಧ ಹಂತಗಳಲ್ಲಿ ಲೋಪಗಳಾಗಿವೆ. ಸೇತುವೆಗಳು ಕುಸಿದಿರುವುದಕ್ಕೆ ಸಿದ್ದಪಡಿಸಿದವರನ್ನು ಇದನ್ನೆಲ್ಲ ಹೊಣೆ ಮಾಡಬೇಕಾಗುತ್ತದೆ ಎಂದು ಸಚಿವರು ಹೇಳಿದರು. 

6 ತಿಂಗಳಲ್ಲಿ 14 ಲೇನ್‌ ಬೆಂಗ್ಳೂರು-ಮುಂಬೈ ರಸ್ತೆ ಕೆಲಸ ಶುರು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಸೇತುವೆ, ಹೆದ್ದಾರಿ ನಿರ್ಮಾಣ ದಲ್ಲಿ ಸಾಮಗ್ರಿಗಳನ್ನು ಬಳಸುವ ಬಗ್ಗೆ ಅಧಿಕಾರಿಗಳು ನನ್ನ ಬಳಿ ಹೇಳುತ್ತಾರೆ. ನಾನು ಎಂಜಿನಿ ಯರ್ ಅಲ್ಲ. ಅಧಿಕಾರಿಗಳನ್ನು ಹೇಳಿ ನಂಬಿ ಒಪ್ಪಿಬಿಟ್ಟಿರುತ್ತೇನೆ. ಈ ಹಿಂದೆ ಸಚಿವನಾಗಿದ್ದಾಗ ಅಧಿಕಾರಿಗಳು ಹೇಳಿದರೆಂದು ಕರಾವಳಿ ಪ್ರದೇಶದಲ್ಲಿ ನಿರ್ಮಿಸಿದ ಸೇತುವೆಗಳಲ್ಲಿ ಹಸಿರು ಲೇಪನ ಇದ್ದ ಕಬ್ಬಿಣ ಬಳಸಲು ಒಪ್ಪಿಗೆ ನೀಡಿದ್ದೆ. ಆ ಸೇತುವೆಗಳು ಬಿದ್ದಿವೆ. ಈಗ ನಿಯಮಗಳನ್ನು ಬಿಗಿಗೊಳಿಸಲಾಗಿದೆ. ರಸ್ತೆಗಳ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ನಿರಂತರ ಸಂಶೋಧನೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. 

ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಸೇತುವೆಗಳ ತಪಾಸಣೆ ಮತ್ತು ನಿರ್ವಹಣೆ ಮಾಡುವ ವ್ಯವಸ್ಥೆ ಇಲ್ಲ ಎಂದು ಹೇಳಿದರು. 
ಇಂಡಿಯನ್ ರೋಡ್ ಪ್ರಧಾನ ಕಾರ್ಯದರ್ಶಿ ಡಿ.ಸಾರಂಗಿ, ಮೂರು ವರ್ಷಗಳಲ್ಲಿ ದೇಶಾದ್ಯಂತ ನಿರ್ಮಾಣ ಹಂತದ 11 ಸೇತುವೆಗಳು ಕುಸಿದಿವೆ. ವಿನ್ಯಾಸ ಮತ್ತು ನಿರ್ಮಾಣ ಹಂತದಲ್ಲಿ ಹಲವು ಲೋಪಗಳಿದ್ದ ಕಾರಣದಿಂದಲೇ ಸೇತುವೆ ಬಿದ್ದಿವೆ ಎಂದರು.

Latest Videos
Follow Us:
Download App:
  • android
  • ios