ಬೆಂಗಳೂರು (ಏ.27):  ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಪರಿಗಣಿಸಿ, ಕೋವಿಡ್‌ ಸೋಂಕಿಗೆ ತುತ್ತಾಗುವ ಪತ್ರಕರ್ತರಿಗೆ ತಾಲೂಕು, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಮುಖ ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲಿರಿಸುವಂತೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪತ್ರಕರ್ತರ ನಿಯೋಗವು ಸೋಮವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿತು. ಕೋವಿಡ್‌ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರು ಹಾಗೂ ಮಾಧ್ಯಮ ಸಿಬ್ಬಂದಿ ತೀವ್ರ ಸಂಕಷ್ಟಎದುರಿಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ಒಳಗಾದ ಪತ್ರಕರ್ತರ ಸ್ಥಿತಿ ಶೋಚನೀಯವಾಗಿದೆ. ಪ್ರಧಾನ ಮಂತ್ರಿ ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಕರೆದಿದ್ದು, ಆ ನಿಟ್ಟಿನಲ್ಲಿ ಈವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆತಿಲ್ಲ. ಕೋವಿಡ್‌ ಎರಡನೇ ಅಲೆಯಲ್ಲಿ ಹಲವು ಪತ್ರಕರ್ತರು ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದರೂ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರಲ್ಲಿ 2 ಲಕ್ಷ ಸಮೀಪಕ್ಕೆ ಸೋಂಕಿತರ ಸಂಖ್ಯೆ : ಎಚ್ಚರಿಕೆ ಅಗತ್ಯ

ಆದ್ದರಿಂದ, ಸರ್ಕಾರ ಮಾಧ್ಯಮ ಕ್ಷೇತ್ರದ ಬಗ್ಗೆ ಗಂಭೀರವಾಗಿ ಗಮನಹರಿಸಬೇಕು. ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಪರಿಗಣಿಸಿ, ಸೋಂಕಿತ ಪ್ರರ್ತಕರ್ತರಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲಿರಿಸುವಂತೆ ನಿಯೋಗ ಮನವಿ ಮಾಡಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಆರೋಗ್ಯ ಸಚಿವ, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಕೊರೋನಾ: ಎಲ್ಲರ ಗಮದಲ್ಲಿ ಇರಲಿ