ಸ್ವಾತಂತ್ರ್ಯ ದಿನಾಚರಣೆ: ಮಹತ್ವದ ಸುತ್ತೋಲೆ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ
ಕೊರೋನಾ ಭೀತಿಯಿಂದ ಶಾಲಾ-ಕಾಲೇಜು ಆರಂಭಗೊಳ್ಳದರ ನಡುವೆಯೂ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಸಿದೆ.
ಬೆಂಗಳೂರು, (ಆ.10) : ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾರ್ಥಿಗಳು ಇಲ್ಲದೆಯೇ ಕಡ್ಡಾಯವಾಗಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಇಂದು (ಸೋಮವಾರ) ಸುತ್ತೋಲೆ ಹೊರಡಿಸಿದ್ದು, ಪ್ರತಿ ವರ್ಷ ಆಗಸ್ 15ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದು ಅತ್ಯಂತ ಪ್ರಾಮುಖ್ಯದ ದಿನವಾಗಿರುತ್ತದೆ.
SSLC ಫಲಿತಾಂಶ ಪ್ರಕಟ, ಮುಖರ್ಜಿಗೂ ತಗುಲಿದ ಕೊರೋನಾ: ಆ. 10ರ ಟಾಪ್ ಹತ್ತು ಸುದ್ದಿ!
ಆದ್ರೆ, ಕೊರೋನಾ ಮಹಾಮಾರಿ ಹಿನ್ನಲೆಯಲ್ಲಿ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ನಿರ್ದೇಶಗಳನ್ನು ಪಾಲಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಶಿಷ್ಟಾಚಾರದೊಂದಿಗೆ ಕಡ್ಡಾಯವಾಗಿ ಆಚರಿಸಲು ಸೂಚಿಸಿದೆ.
ಹೀಗಾಗಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ, ಕೊರೋನಾ ಸೋಂಕಿನ ಮಾರ್ಗಸೂಚಿಗಳನ್ನು ಅನುಸಿರಿಸಿಕೊಂಡು, ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.