DK Shivakumar Mantralayam visit :ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಂತ್ರಾಲಯ ಪ್ರವಾಸ ಕೈಗೊಳ್ಳಲಿದ್ದು, ರಾಘವೇಂದ್ರ ಸ್ವಾಮಿಗಳ ಮಠ, ಮಂಚಾಲಮ್ಮ ದೇವಸ್ಥಾನ, ಬಿಚ್ಚಾಲಿ ಹಾಗೂ ಗಾಣಧಾಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

ರಾಯಚೂರು (ಅ.21): ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬುಧವಾರ ಮಂತ್ರಾಲಯದ ಪ್ರವಾಸ ಕೈಗೊಳ್ಳಲಿದ್ದಾರೆ. ಬುಧವಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಬಳಿಕ ಗ್ರಾಮದೇವತೆ ಮಂಚಾಲಮ್ಮರಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲೆಲ್ಲಿ ಪೂಜೆ?

ಗುರುರಾಯರ ಮೂಲಬೃಂದಾವನದ ದರ್ಶನ ಪಡೆಯಲಿದ್ದಾರೆ. ಅಲ್ಲಿಂದ ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಜಪದಕಟ್ಟೆಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ, ಗಾಣಧಾಳಕ್ಕೆ ಬಂದು ಪಂಚಮುಖಿ ಆಂಜನೇಯ್ಯ ಸ್ವಾಮಿಗಳ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: ಹಾಸನಾಂಬ ದರ್ಶನ: ಒಂದೇ ದಿನ, 11 ಗಂಟೆಯಲ್ಲಿ 3.10 ಲಕ್ಷ ಜನ ದರ್ಶನ, ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದೇನು?

ರಾಯಚೂರು ಗ್ರಾಮೀಣ ಬ್ಲಾಕ್‌ನ ಪದಾಧಿಕಾರಿಗಳೊಂದಿಗೆ ಡಿಕೆಶಿ ಸಭೆ:

ಮಧ್ಯಾಹ್ನ ಪಂಚಮುಖಿಯಲ್ಲಿ ರಾಯಚೂರು ಗ್ರಾಮೀಣ ಬ್ಲಾಕ್‌ ನ ಹೊಸ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲಿಂದ ಮರಳಿ ಮಂತ್ರಾಲಯಕ್ಕೆ ತೆರಳಿ, ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ಯಶವಂತಪುರ ರೈಲಿನಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಡಿಸಿಎಂನ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.