ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅಹಿಂಸಾ ವಿರುದ್ಧ ದೂರು
ನಟ ಚೇತನ್ ಮಾತಾಡಿದ್ದೆಲ್ಲ, ಬರೆದಿದ್ದಲ್ಲ ವಿವಾದವೇ ಎಂಬಂತಾಗಿದೆ. ಕಳೆದ ವಾರ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದರು. ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಚೇತನ್ ಅಹಿಂಸಾ ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
ಬೆಂಗಳೂರು (ಡಿ.17): ನಟ ಚೇತನ್ ಮಾತಾಡಿದ್ದೆಲ್ಲ, ಬರೆದಿದ್ದಲ್ಲ ವಿವಾದವೇ ಎಂಬಂತಾಗಿದೆ. ಕಳೆದ ವಾರ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದರು. ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಚೇತನ್ ಅಹಿಂಸಾ ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಚೇತನ್ ವಿರುದ್ಧ ವಕೀಲ ಆರ್‌ಎಲ್ಎನ್ ಮೂರ್ತಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದು ಎನ್ ಸಿಆರ್ ದಾಖಲಿಸಿದ ಪೊಲೀಸರು.
ಧಾರ್ಮಿಕ ಸ್ವಾತಂತ್ರ್ಯ ಅಸಮಾನತೆಯ ಸಂರಕ್ಷಣೆ, ಗಾಂಧಿವಾದ ಕಿತ್ತೊಗೆಯಲು ನಟ ಚೇತನ್ ಆಗ್ರಹ!
ಟ್ವಿಟರ್‌ನಲ್ಲಿ ಏನಿದೆ?
ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿರುವ ಆರೋಪ ಚೇತನ್ ಅಹಿಂಸಾ ತಮ್ಮ ಪೇಸ್ ಬುಕ್ ಪೇಜ್ ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್. ಇಬ್ಬರು ಯೋಧರ ಕಥೆ ಎಂದು ಕೆಂಪೇಗೌಡ ಹಾಗೂ ಟಿಪ್ಪು ಸುಲ್ತಾನ್ ಬಗ್ಗೆ ಬರೆದುಕೊಂಡಿದ್ದಾರೆ. ಕೆಂಪೇಗೌಡ- ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್- ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂದ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಬರೆದುಕೊಂಡಿರುವ ಚೇತನ್ ಅಹಿಂಸಾ. ಪೋಸ್ಟ್‌ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಬರೆದಿದ್ದಾರೆಂದು ಆರೋಪ ಕೇಳಿಬಂದಿದೆ.