ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಕೀರ್ ಹುಸೇನ್ ಎಂಬಾತನ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಶಿವಮೊಗ್ಗ (ಮೇ.16): ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಕೀರ್ ಹುಸೇನ್ ಎಂಬಾತನ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಾರ್ಗಲ್ ನಿವಾಸಿಯಾಗಿರುವ ಆರೋಪಿ ಶಕೀರ್ ಹುಸೇನ್, 'ಪ್ರಜಾಪ್ರತಿನಿಧಿ' ಎಂಬ ವಾಟ್ಸ್‌ಆ್ಯಪ್ ಗುಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ಮಂಡಿಯೂರಿ ಕುಳಿತಿರುವಂತೆ ಚಿತ್ರಿಸಿದ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಪ್ರಚೋದನಾತ್ಮಕ ಎಂದು ಪರಿಗಣಿಸಿರುವ ಕಾರ್ಗಲ್ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿದ್ದಾರೆ. 

ಇದನ್ನೂ ಓದಿ: ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಈ ಪೋಸ್ಟ್‌ಗೆ ಯಾರಾದರೂ ಪ್ರಚೋದನೆ ನೀಡಿದ್ದಾರಾ, ಇದು ಫಾರ್ವರ್ಡ್ ಮಾಡಿದ ಪೋಸ್ಟ್ ಆಗಿದೆಯೇ ಅಥವಾ ಆರೋಪಿಯೇ ರಚಿಸಿದ್ದಾನೆಯೇ ಎಲ್ಲ ಆಯಾಮದಲ್ಲೂ ತನಿಖೆ ಆರಂಭವಾಗಿದೆ. ಅಗತ್ಯವಿದ್ದರೆ ಸೈಬರ್ ಕ್ರೈಂ ವಿಭಾಗದ ಸಹಾಯ ಪಡೆಯಲು ಪೊಲೀಸರು ನಿರ್ಧರಿಸಿದ್ದಾರೆ. ಎಡಿಟ್ ಮಾಡಿರುವ ಈ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು. ಕಾನೂನು ಅರಿವಿಲ್ಲದೆ ಬಳಕೆದಾರರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.