ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ
ಮೈಸೂರು (ಜು.17) ಇನ್ಸ್ಟಾಗ್ರಾಮ್‌ನಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ
ರಂಜನೀಶ್ ಬಂಧಿತ ಯುವಕ. ಸಿಎಂ ಸಿದ್ದರಾಮಯ್ಯ ವಿರುದ್ಧ ಇನ್ಸ್ಟಾಗ್ರಾಮ್‌ನಲ್ಲಿ ಅವಹೇಳನ ಮಾಡಿರುವ ಯುವಕ. ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ. ಈ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸಲೀಸಾಗಿ ಕೊಲೆಗಳು ಆಗುತ್ತಿವೆ ಎಂದು ಪೋಸ್ಟ್ ಮಾಡಿದ್ದ ರಂಜನೀಶ್.
ಈ ಘಟನೆ ಸಂಬಂಧ ಸೈಬರ್ ಕ್ರೈಂಗೆ ದೂರು ನೀಡಿದ್ದ.ಮೆಲ್ಲಹಳ್ಳಿ ರವಿ. ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 504,505ನೇ (1)ಬಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಟಿ.ನರಸೀಪುರ ಪೋಲೀಸರು. ಯುವಕ ರಂಜನೀಶ್‌ರನ್ನ ಬಂಧಿಸಿ ಬಳಿಕ ಬೇಲ್ ಮೂಲಕ ಬಿಡುಗಡೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದುಗಳ ಹತ್ಯೆ: ಮಾಜಿ ಸಚಿವ ಶ್ರೀರಾಮುಲು
