Farmers Land ಇನಾಂ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಪಹಣಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
* ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಪಹಣಿ ನೀಡುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿ
* ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ
* ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ
ಬೆಂಗಳೂರು, (ಡಿ.09): ರಾಜ್ಯ ವಿವಿಧೆಡೆ ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ (Farmers) ಪಹಣಿ ನೀಡುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನೂ ಒಂದು ವರ್ಷ ಮುಂದುವರೆಸಲು ಸಚಿವ ಸಂಪುಟ ಸಭೆ(Cabinet Meeting) ಒಪ್ಪಿಗೆ ನೀಡಿದೆ.
ಇಂದು(ಗುರುವಾರ) ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting ಈ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕಾಗಿ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಲು ನಿರ್ಧರಿಸಿದೆ.
KSRTC Jobs ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಕೆಎಸ್ಆರ್‌ಟಿಸಿ
11 ಇ ಅಡಿ ಕಂದಾಯ ಭೂಮಿ ನಕ್ಷೆ ತಯಾರಿಸಲು ಪರವಾನಗಿ ಪಡೆದ ಸರ್ವೆಯರ್‌ಗಳ ಜತೆ ಇನ್ನು ಮುಂದೆ ಸರ್ಕಾರಿ ಸರ್ವೆಯರ್‌ಗಳನ್ನು ಬಳಸಬಹುದಾಗಿದ್ದು, ಇದಕ್ಕಾಗಿ ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ಮಸೂದೆ2021 ಕ್ಕೂ ಸಂಪುಟ ಸಭೆ ಒಪ್ಪಿಗೆ ನೀಡಿತು.
ಇನ್ನು ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಇನ್ನೂ ಅನೇಕ ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಸಂಪುಟ ಸಭೆಯ ಮುಖ್ಯಾಂಶಗಳು
* 2022-23 ನೇ ಶೈಕ್ಷಣಿಕ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ಪ್ರೋತ್ಸಾಹದಾಯಕ ಕಾರ್ಯಕ್ರಮದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 152.87 ಕೋಟಿ ರೂ ವೆಚ್ಚದಲ್ಲಿ ಉಚಿತ ಪಠ್ಯ ಪುಸ್ತಕಗಳು ಮತ್ತು ಇತರ ಕಲಿಕಾ ಸಾಮಗ್ರಿಗಳನ್ನು ವಿತರಿಸಲು ಅನುಮೋದನೆ.
* ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ)ಮಸೂದೆಗೆ 2021 ಕ್ಕೆ ಅನುಮೋದನೆ, ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಮಸೂದೆ2021 ಕ್ಕೆ ತಿದ್ದುಪಡಿ.
* ಕರ್ನಾಟಕ ಮಹಾನಗರ ಪಾಲಿಕೆಗಳು ಮತ್ತು ಇತರೆ ಕಾನೂನು (ಮೂರನೇ ತಿದ್ದುಪಡಿ) ಮಸೂದೆ 2021 ಕ್ಕೆ ಅನುಮೋದನೆ.
ಸೋಂಕಿನ ಬಗ್ಗೆ ಬೊಮ್ಮಾಯಿ ಹೇಳಿದ್ದೇನು?
ರಾಜ್ಯದಲ್ಲಿ(Karnataka) ಕೆಲ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣದಲ್ಲಿ ಇರುವುದರಿಂದ ಯೋಚಿಸಿ, ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇನ್ನು ಹೊಸ ಮಾರ್ಗ ಸೂಚಿಗಳನ್ನು ಜಾರಿಗೆ ತಂದರೆ ಇಡೀ ರಾಜ್ಯಕ್ಕೆ ತರಬೇಕಾಗುತ್ತದೆ. ಕೇಂದ್ರ ಸರ್ಕಾರದಿಂದ(Govt Of India) ಕೂಡ ಕೆಲ ಮಾರ್ಗಸೂಚಿ ಹೊರಡಿಸಿದ್ದಾರೆ. ಹೀಗಾಗಿ ಇವೆಲ್ಲವನ್ನು ಪರಮಾರ್ಶಿಸಿ, ಈ ಡಿಸೆಂಬರ್ ಹಾಗೂ ಜನವರಿ ವರೆಗೆ ನಿಯಂತ್ರಣ ಮಾಡಲು ಮಾರ್ಗಸೂಚಿ ಹೊರಡಿಸುತ್ತೇವೆ ಎಂದರು.
ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿ, ನಿರ್ಧಾರ ಮಾಡ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.