ರಾಜ್ಯದ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ, ಇನ್ನು ಸರ್ಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕ ಹೇಳ್ಬೇಕಾ? : ಎಚ್‌ಡಿಕೆ
ರಾಜ್ಯದ ಹಾದಿ-ಬೀದಿಯಲ್ಲಿ ಕೊಲೆಗಳಾಗುತ್ತಿದ್ದು, ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರು (ಜು.20) : ರಾಜ್ಯದ ಹಾದಿ-ಬೀದಿಯಲ್ಲಿ ಕೊಲೆಗಳಾಗುತ್ತಿದ್ದು, ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.
ಸಿಎಂ ಸನ್ನೆ ಮೇರೆಗೆ ಶಾಸಕರ ಸಸ್ಪೆಂಡ್: ಎಚ್‌ಡಿಕೆ ಆರೋಪ!
ಸರ್ಕಾರ ಸಹ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟುಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳಾಗುತ್ತಿವೆ. ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಇಂದು ಜೆಡಿಎಸ್, ಬಿಜೆಪಿ ಪ್ರತ್ಯೇಕ ಶಾಸಕಾಂಗ ಸಭೆ
ಬೆಂಗಳೂರು: ವಿಧಾನಸಭೆಯಲ್ಲಿ ಉಂಟಾದ ಗದ್ದಲ, ಕೋಲಾಹಲ ಸಂಬಂಧ 10 ಬಿಜೆಪಿ ಶಾಸಕರ್ನು$್ನ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಗುರುವಾರ ಪ್ರತ್ಯೇಕವಾಗಿ ಶಾಸಕಾಂಗ ಸಭೆ ಕರೆದಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಿ ತೀರ್ಮಾನಿಸಲಿವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಭಾಧ್ಯಕ್ಷರ ನಡೆಯನ್ನು ಖಂಡಿಸಿ ಧರಣಿ ನಡೆಸುವ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಬಿಜೆಪಿ ಸದನಕ್ಕೆ ಗೈರಾಗುವ ಸಾಧ್ಯತೆ ಇದೆ. ಒಂದು ವೇಳೆ ಬಿಜೆಪಿ ಗೈರಾಗುವ ನಿರ್ಣಯ ಕೈಗೊಂಡರೆ, ಜೆಡಿಎಸ್ ಸಹ ಗೈರಾಗುವ ತೀರ್ಮಾನ ಮಾಡುವ ನಿರೀಕ್ಷೆ ಇದೆ. ಸದನಕ್ಕೆ ಹಾಜರಾಗಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡರೆ ಇದಕ್ಕೆ ಜೆಡಿಎಸ್ ಸಹಮತ ವ್ಯಕ್ತಪಡಿಸಿ ಧರಣಿಗೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದರ್ಪ, ದಬ್ಬಾಳಿಕೆ, ದುರಂಹಕಾರ ಹೊರಬಿದ್ದಿದೆ, ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ