47 ಕೋಟಿ ಹಗರಣ: ಅರಸು ಟರ್ಮಿನಲ್‌ ಮಾಜಿ ಎಂಡಿ ಶಂಕರಪ್ಪ ಅರೆಸ್ಟ್‌

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ನಿಗಮದ ಹಾಲಿ ಎಂಡಿ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು, ಮಾಜಿ ಎಂಡಿ ಶಂಕರಪ್ಪ ಅವರನ್ನು ಬಂಧಿಸಿದ್ದಾರೆ.
 

Devaraj Arasu Truck Terminal Former MD  S Shankarappa Arrested for 47 crore Scam grg

ಬೆಂಗಳೂರು(ಮೇ.29):  ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ₹47.10 ಕೋಟಿ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಎಸ್.ಶಂಕರಪ್ಪರವರನ್ನು ಸಿಐಡಿ ಬಂಧಿಸಿದೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ನಿಗಮದ ಹಾಲಿ ಎಂಡಿ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು, ಮಾಜಿ ಎಂಡಿ ಶಂಕರಪ್ಪ ಅವರನ್ನು ಬಂಧಿಸಿದ್ದಾರೆ.

ಪ್ರಸುತ್ತ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯ ಉಪ ನಿರ್ದೇಶಕರಾಗಿದ್ದ ಶಂಕರಪ್ಪ ಅವರು, ಈ ಹಿಂದೆ ಡಿಡಿಯುಟಿಟಿಎಲ್‌ನಲ್ಲಿ ಎಂ.ಡಿ ಆಗಿದ್ದರು. ಆಗ ನಿಗಮದ ತುಂಡು ಗುತ್ತಿಗೆ ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಬಗ್ಗೆ ತನಿಖೆಯಲ್ಲಿ ಪುರಾವೆಗಳು ಸಿಕ್ಕಿವೆ ಎಂದು ಸಿಐಡಿ ಮೂಲಗಳು ಹೇಳಿವೆ.

News Hour: ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ!

ಏನೀದು ಅಕ್ರಮ?

2021ರ ಅಕ್ಟೋಬರ್ 25ರಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ ₹10 ಕೋಟಿ ವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆದರೆ ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ ₹47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ಸರ್ಕಾರ ಆದೇಶಿಸಿತು.

Latest Videos
Follow Us:
Download App:
  • android
  • ios