ಹನುಮ ಜನ್ಮಸ್ಥಳ ಅಭಿವೃದ್ಧಿ ಮುಂದಿನ ಗುರಿ: ಮಾಜಿ ಸಿಎಂ ಬೊಮ್ಮಾಯಿ
ರಾಮನಿಗೂ ರಾಜ್ಯಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು(ಜ.23): ರಾಮಜನ್ಮ ಭೂಮಿ ಹೋರಾಟದಲ್ಲಿ ರಾಜ್ಯದ ಪಾತ್ರ ದೊಡ್ಡದಿದ್ದು, ಆಂಜನೇಯನ ಜನ್ಮಭೂಮಿ ಅಭಿವೃದ್ಧಿಪಡಿಸುವುದು ನಮ್ಮ ಮುಂದಿನ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಲಬ್ರೂಹಿ ಅತಿಥಿ ಗೃಹದ ಬಳಿ ಇರುವ ಮಾರುತಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಭಾರತದ ಇತಿಹಾಸದಲ್ಲಿ ಮಹತ್ವದ ಭಕ್ತಿ ಭಾವದ ದಿನ, ಐತಿಹಾಸಿಕ ದಿನ. ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ದಿನ ಎಂದರು.
ತಮ್ಮ ಮನೆಗೇ ರಾಮ ಬಂದಿದ್ದಾನೆಂಬ ಸಂಭ್ರಮದಲ್ಲಿ ಜನರಿದ್ದಾರೆ: ಕೇಂದ್ರ ಸಚಿವ ಜೋಶಿ
ರಾಮನಿಗೂ ರಾಜ್ಯಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಕರ್ನಾಟಕದಲ್ಲೇ ಇದೆ. ಆಂಜನೇಯ ಇದ್ದರೆ ರಾಮ ಪರಿಪೂರ್ಣ. ಮುಂದಿನ ನಮ್ಮ ಗುರಿ ಆಂಜನೇಯ ಜನ್ಮ ಭೂಮಿ ಅಭಿವೃದ್ಧಿ ಮಾಡುವುದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಆಂಜನೇಯ ಕ್ಷೇತ್ರ ಅಭಿವೃದ್ಧಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ರಾಮ ರಾಜ್ಯ ಸ್ಥಾಪನೆ ನಮ್ಮ ಮುಂದಿನ ಗುರಿಯಾಗಿದೆ. ರಾಮಮಂದಿರ ಉದ್ಘಾಟನೆ ಅಮೃತ ಘಳಿಗೆ. ಇಂತಹ ಐತಿಹಾಸಿಕ ಸಂದರ್ಭದಲ್ಲಿ ನಾವಿದ್ದೇವೆ ಎನ್ನುವುದು ನಮ್ಮ ಖುಷಿ. ಇಂತಹ ಪವಿತ್ರವಾದ ದಿನ ನಾವು ರಾಜಕೀಯ ಬೆರೆಸಿ ಮಾತನಾಡುವುದಿಲ್ಲ. ಒಂದು ದೇಶದ ಪ್ರಜಾಪ್ರಭುತ್ವದಲ್ಲಿ ಜನರೇ ಅಂತಿಮ ನಿರ್ಣಯ ಮಾಡುತ್ತಾರೆ. ಜನರ ಕೆಲಸ ಮಾಡುವುದು ಎಲ್ಲಕ್ಕಿಂತ ದೊಡ್ಡ ಕೆಲಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಈ ಕೆಲಸವಾಗುತ್ತಿದೆ. ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದರು.