ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ 'ಒಡನಾಡಿ' ಇದೀಗ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಎಂಟ್ರಿ!

ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಮುಂದಾಗಿದೆ.

dharmastala soujanya rape and murder case Mysore odanadi seva samste enters the struggle for justice rav

ಧರ್ಮಸ್ಥಳ (ಜು.4): ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಮುಂದಾಗಿದೆ.

ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯಕೊಡಿಸಲು ಒಡನಾಡಿ ಸಂಸ್ಥೆ ಹೋರಾಟಕ್ಕೆ ಇಳಿಯುತ್ತಿದ್ದಂತೆ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ ಭೇಟಿಯಾದ ಒಡನಾಡಿಯ ಮುಖಂಡರು. ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ ಒಡನಾಡಿ ಬೆಂಬಲಿಸುತ್ತದೆ. ನ್ಯಾಯ ಸಿಗುವವರೆಗೂ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದಿರುವ ಸಂಸ್ಥೆ. ಈ ಹಿಂದೆ ಮುರುಘಾಮಠ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ. 

ಸಂತೋಷ್ ರಾವ್ ಆರೋಪಿಯಲ್ಲ ಎಂದು ಸಾಬೀತಾದ ಹಿನ್ನಲೆ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿರುವ ಪಡೆದುಕೊಂಡಿರುವ ಪ್ರಕರಣ. ಮತ್ತೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಸೌಜನ್ಯ ಪ್ರಕರಣ

ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

ಸೌಜನ್ಯ ಪರವಾಗಿ ರಾಜ್ಯಾದ್ಯಂತ ಹೋರಾಟ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧ ಒಡನಾಡಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರುವುದಕ್ಕೆ ದೇಶದ ಕಾನೂನಿಗೆ ಇದು ಸಾಧ್ಯವಾಗಿಲ್ಲ ಎಂಬುವುದು ನಗೆ ಪಾಟಿಲಿನ ಸಂಗತಿ ಎಂದರು.

ಸಿಬಿಐ ಘನತೆಯನ್ನ ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರು ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಸ್ಟ್ಯಾನ್ಲಿ, ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ. ಯಾರು ಸೌಜನ್ಯಳನ್ನ ಅತ್ಯಾಚಾರ ಮಾಡಿದ್ರು ಎಂಬುವುದೇ ನಮ್ಮ ಹುಡುಕಾಟ ಎಂದು ತಿಳಿಸಿದರು.

ಧರ್ಮಾಧಿಕಾರಿ ಹೆಗ್ಗಡೆಯವರು ಈ ಪ್ರಕರಣದ ಬಗ್ಗೆ ಮಾತನಾಡಬೇಕು: 

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದರ ಬಗ್ಗೆ ಹೆಚ್ಚು ಮಾತನಾಡಬೇಕು. ಸಾಮಾಜಿಕ ಜವಾಬ್ದಾರಿ ಅನುಶಾಸನ ಬದ್ಧವಾದ ಹೊಣೆಗಾರಿಕೆ ಹೊತ್ತವರು  ತಮ್ಮ ಮನೆ ಬಾಗಿಲಲ್ಲಿರುವಂತಹ ತಮ್ಮ ಮನೆಯ ಮಗುವಿನ ಮೇಲಾಗಿರುವ ಅತ್ಯಾಚಾರದ ಬಗ್ಗೆ ಮೌನವಾಗಿರಬಾರದು. ಆ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳುವುದು ಅವರ ಕರ್ತವ್ಯವಾಗಿದೆ ಎಂದರು.

Muruga Sree case: ಜೈಲು ಸೇರಿದ ಸೌಭಾಗ್ಯ ಬಗ್ಗೆ ಒಡನಾಡಿ ಸ್ಟ್ಯಾನ್ಲಿ ಬರೆದ ಪತ್ರ ವೈರಲ್

ಆ ಮಗುವಿಗೋಸ್ಕರ ನಾನು ಇದ್ದೇನೆ ಎನ್ನೋದು ಹೆಗ್ಗಡೆ ಅವರ ಬಾಯಿಂದ ಬರಲಿ. ಆ ಮಾತು ಅವರ ಬಾಯಿಯಿಂದ ಬಂದರೆ ನಾವು ಅವರಿಗೆ ಋಣಿಗಳಾಗುತ್ತೇವೆ. ಸೌಜನ್ಯ ಪರ ಹೋರಾಟ ಧರ್ಮದ ಕಾರ್ಯವಾಗಿದೆ. ಈ ಮಗುವಿಗೆ ನ್ಯಾಯವನ್ನ ದೊರಕಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಹೋರಾಟ ನಡೆಸುತ್ತೇವೆ ಎಂದು ಶಪಥ ಮಾಡಿದರು.

Latest Videos
Follow Us:
Download App:
  • android
  • ios