ಜುಲೈನಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ: ಸಚಿವ ಜೋಶಿ
ಬಹು ನಿರೀಕ್ಷೆಯ ಧಾರವಾಡ-ಬೆಂಗಳೂರು ಮಧ್ಯದ ವಂದೇ ಭಾರತ್ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿಧ್ಯುಕ್ತವಾಗಿ ಆರಂಭವಾಗಲಿದೆ. ಈ ಸಂಬಂಧ ದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನ್ ವೈಷ್ಣವ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Union minister pralhad joshi) ಭೇಟಿ ಮಾಡಿ ಚರ್ಚಿಸಿದರು.
ಹುಬ್ಬಳ್ಳಿ (ಜೂ.1) : ಬಹು ನಿರೀಕ್ಷೆಯ ಧಾರವಾಡ-ಬೆಂಗಳೂರು ಮಧ್ಯದ ವಂದೇ ಭಾರತ್ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿಧ್ಯುಕ್ತವಾಗಿ ಆರಂಭವಾಗಲಿದೆ. ಈ ಸಂಬಂಧ ದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನ್ ವೈಷ್ಣವ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Union minister pralhad joshi) ಭೇಟಿ ಮಾಡಿ ಚರ್ಚಿಸಿದರು.
ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿ(Vande bharat train)ಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ. ಧಾರವಾಡ ಬೆಂಗಳೂರು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಎರಡನೆಯ ವಂದೇ ಭಾರತ್ ರೈಲು ಇದಾಗಲಿದೆ.
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಆರಂಭ ಇನ್ನೂ ವಿಳಂಬ?
ಹುಬ್ಬಳ್ಳಿ ಧಾರವಾಡ ಮಹಾನಗರದ ಜನರ ಬಹು ನಿರೀಕ್ಷಿತ ಈ ಉತ್ಕೃಷ್ಟರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದು ಜೋಶಿ ಹೇಳಿದ್ದಾರೆ.
ಈ ರೈಲಿನ ವಿಶೇಷತೆ ಏನು?
ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಷಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದೆ. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರಿಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ. ವಂದೇ ಭಾರತ್ ರೈಲಿನಲ್ಲಿ ಆನ್‌ಬೋರ್ಡ್ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್ ಲೈಟ್ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲು, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್ ಪಾಯಿಂಟ್, ಸಿಸಿಕ್ಯಾಮೆರಾ, ಬಯೋ ಶೌಚಾಲಯ ವ್ಯವಸ್ಥೆ ಇದೆ ಎಂದು ಸಚಿವ ಜೋಶಿ ವಿವರಿಸಿದ್ದಾರೆ.
ಈ ಕುರಿತು ಟ್ವಿಟ್ ಕೂಡ ಮಾಡಿರುವ ಜೋಶಿ ಅವರು, ಜುಲೈನಿಂದ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ.
ಈಶಾನ್ಯ ಭಾರತಕ್ಕೂ ಸಿಕ್ತು ವಂದೇ ಭಾರತ್ ರೈಲು: ದೇಶದ 18ನೇ ಸೆಮಿ ಹೈ ಸ್ಪೀಡ್ ಟ್ರೈನಿಗೆ ಪ್ರಧಾನಿ ಮೋದಿ ಚಾಲನೆ
ವಂದೇ ಭಾರತ್ ರೈಲು ಸಂಚಾರದ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಪ್ರಸ್ತಾಪಿಸಿ ‘ಕನ್ನಡಪ್ರಭ’ ಮೇ 31ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿರುವ ಸಚಿವ ಜೋಶಿ ಅವರು, ಜುಲೈಯಿಂದ ರೈಲು ಸಂಚರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.