Corona In Karnataka: ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ, ಜನರಲ್ಲಿ ಮತ್ತೆ ಆತಂಕ!
* ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ
* ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ತಗುಲಿದೆ ಸೋಂಕು
* ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಅಭಿಪ್ರಾಯ ತಿಳಿಸಿದ ನೆಟ್ಟಿಗರು
ಧಾರವಾಡ, (ನ.25): ಧಾರವಾಡದ(Dharwad) ಸತ್ತೂರಿನಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ (SDM Medical College) ಲಸಿಕೆ ಪಡೆದ 66 ವಿದ್ಯಾರ್ಥಿಗಳಲ್ಲಿ ಕೊರೋನಾ ವೈರಸ್ ಸೋಂಕು (Coroanvrus) ದೃಢಪಟ್ಟಿದ್ದು, ಲಸಿಕೆ ಪಡೆದ ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.
ಇವರೆಲ್ಲರಲ್ಲೂ ಕೋವಿಡ್ ಲಕ್ಷಣಗಳಿಲ್ಲ((Covid Symptoms). ಆದರೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿದೆ. ಈವೇಳೆ ವಿದ್ಯಾರ್ಥಿಗಳೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹಾಸ್ಟೆಲ್‌ಗಳನ್ನು (Hostel) ಸೀಲ್‌ಡೌನ್ (Seal Down)ಮಾಡಲಾಗಿದೆ.
Covid19: ಮತ್ತೆ ಏರಿಕೆ ಕಂಡ ಸೋಂಕಿತರ ಸಂಖ್ಯೆ: ಮನೆ ಬಾಗಿಲಿಗೇ ಬರಲಿದೆ 2ನೇ ಡೋಸ್
ಸಂಸ್ಥೆಯಲ್ಲಿ ಪದವಿ ಓದುತ್ತಿರುವ 400 ವಿದ್ಯಾರ್ಥಿಗಳಲ್ಲಿ (Students) ಈಗಾಗಲೇ 300 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಉಳಿದ 100 ವಿದ್ಯಾರ್ಥಿಗಳ ಸ್ವ್ಯಾಬ್ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 3 ಸಾವಿರ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ..
ಜಿಲ್ಲಾಡಳಿತ,ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಹಾಗೂ ಎಸ್‌ಡಿಎಂ ಆಡಳಿತ ಮಂಡಳಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಿವೆ.
ಈ ಬಗ್ಗೆ ಸಾಕಷ್ಟು ನೆಟ್ಟಿಗರು ಸಾಮಾಜಿಕ ಜಾಲತಾಣ 'ಕೂ' ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಳವಾದರೆ ನಿಯಂತ್ರಣ ಕಷ್ಟ
ಅವಳಿನಗರದಲ್ಲಿ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್–19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ ಎಂದು ಲಿಖಿತ್ ರೈ ಕೂ ಮಾಡಿದ್ದಾರೆ.
ಸೋಂಕು ಹೆಚ್ಚಳವಾಗುವ ಭೀತಿಯೂ ಕಾಡುತ್ತಿದೆ
ಧಾರವಾಡ ಜಿಲ್ಲೆಯಲ್ಲಿ ಕೋವಿಡ್–19 ಸೋಂಕು ದೃಢಪಡುತ್ತಿರುವ ದರ ಶೇ 10.೫ರಷ್ಟಿದೆ. ಲಾಕ್‌ಡೌನ್‌ನಲ್ಲಿ ಒಂದಷ್ಟು ರಿಯಾಯಿತಿಯೊಂದಿಗೆ ಪರಿಷ್ಕೃತ ಆದೇಶ ನೀಡಿದ ಬೆನ್ನಲ್ಲೇ ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜನರ ಓಡಾಟ ಹೆಚ್ಚಾಗಿದೆ. ಕಿರಾಣಿ ಹಾಗೂ ಇನ್ನಿತರ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿದೆ. ಇದರ ಬೆನ್ನಲ್ಲೇ ಮತ್ತೆ ಸೋಂಕು ಹೆಚ್ಚಳವಾಗುವ ಭೀತಿಯೂ ಕಾಡುತ್ತಿದೆ ಎಂದು ಗಮನ ಎನ್ನುವರು ಆತಂಖ ವ್ಯಕ್ತಪಡಿಸಿದ್ದಾರೆ.
ನಿರ್ಲಕ್ಷ್ಯವೇ ಕಾರಣ
ಕೋವಿಡ್ ಸೋಂಕಿಗೆ ಕಾರಣವೇನು ಅಂತ ಪದೇ ಪದೇ ಚರ್ಚಿಸುವುದರಲ್ಲಿ ಅರ್ಥವಿಲ್ಲ, ಕಾರಣ ಒಂದೇ ನಮ್ಮ ಜೀವನ ಪದ್ದತಿ, ಸದ್ಯದ ಜೀವನ ಪದ್ದತಿ. 66 ವಿದ್ಯಾರ್ಥಿಗಳಿಗೆ ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಸೋಂಕು ಹರಡತ್ತೆ ಅಂತಾದ್ರೆ ಅವರ ನಿರ್ಲಕ್ಷ್ಯವೇ ಕಾರಣ, ಇನ್ನೇನು ಇರಲು ಸಾಧ್ಯ ಎಂದು ಸುನೀಲ್ ಹೇಳಿದ್ದಾರೆ.
ಆತಂಕದ ಛಾಯೆ ಮೂಡಿಸಿದೆ
ಧಾರವಾಡದಲ್ಲಿ 66 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕದ ಛಾಯೆ ಮೂಡಿಸಿದೆ. ಕಾಲೇಜಿಗೆ ಸಂಬಂಧಿಸಿದ 2 ಹಾಸ್ಟೆಲ್ ಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ ಹಾಗೂ ಅಧಿಕಾರಿಗಳಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ ಚಂದನಾ.
ಸೋಂಕಿತರು ಹೊರ ರಾಜ್ಯದವರು
ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಮೊದಲ ವರ್ಷದ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಒಳಗಾದ ವಿದ್ಯಾರ್ಥಿಗಳಲ್ಲಿ ಬಹುತೇಕರು ಹೊರರಾಜ್ಯದವರು. ಅದೃಷ್ಟವಶಾತ್ ಕೊರೋನ ಎಂದು ಬಹುಬೇಗ ಪತ್ತೆಹಚ್ಚಲಾಗಿದ್ದು ಸೂಕ್ತವಾಗಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಬೇಗ ಗುಣಮುಖರಾಗಲಿ ಎಂದು ಆಶಿಸೋಣ ಎಂದಿದ್ದಾರೆ ಹರ್ಷಿತಾ.