ತೆರಿಗೆ ಹಂಚಿಕೆಯಲ್ಲಿ ತಾರತಮ್ಯ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು!

ರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ NSUIನ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

Discrimination in tax allocation by union govt Congress NSUI Protest at bengaluru Mangaluru  rav

ಬೆಂಗಳೂರು (ಫೆ.8): ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ NSUIನ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರ ಎದುರು ಇಂದು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ ಬಳಿದರು. ತಕ್ಷಣ ಕಾರ್ಯಕರ್ತರನ್ನು ವಶಕ್ಕೆ ಪಡೆದ ವಿಧಾನಸೌಧ ಪೊಲೀಸರು. ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದರು. 

ಅನ್ಯಾಯ ಸರಿಪಡಿಸದಿದ್ದರೆ ಕೇಂದ್ರ ಸರ್ಕಾರ ಏಕೆ ಬೇಕು?: ಡಿಕೆ ಶಿವಕುಮಾರ ಕಿಡಿ

ಬಿಜೆಪಿ ಸಂಸದರ ವಿರುದ್ಧ ಆಕ್ರೋಶ:

ಮಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ತೆರಿಗೆ ನೀಡದೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದರೂ ರಾಜ್ಯ ಬಿಜೆಪಿ ಪ್ರಧಾನಿಗಳ ಬಳಿ ಈ ಬಗ್ಗೆ ಮಾತುಕತೆ ನಡೆಸದೇ ಸಂಸದರು ಮೌನವಾಗಿದ್ದಾರೆ ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ ಕಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು. ಈ ಹಿನ್ನೆಲೆ ಮಂಗಳೂರಿನಲ್ಲಿ ಅಶೋಕ್ ನಗರ ಬಳಿಯಿರುವ  ಅಶೋಕ ಅಪಾರ್ಟ್‌ಮೆಂಟ್ ನಲ್ಲಿರೋ  ನಿವಾಸಕ್ಕೆ ಬಿಗಿ ಭದ್ರತೆ ಏರ್ಪಡಿಸಿರುವ ಪೊಲೀಸರು. ಫ್ಲಾಟ್ ಗೆ ಎಂಟ್ರಿಯಾಗೋ ರಸ್ತೆ ಬಳಿಯ ಬ್ಯಾರಿಕೇಡ್ ಹಾಕಿರುವ ಪೊಲಿಸರು. ಸುಮಾರು 20 ಕ್ಕೂ ಪೊಲೀಸರಿಂದ ಫ್ಲಾಟ್ ಮುಂಭಾಗ, ನಿವಾಸಕ್ಕೂ ಭದ್ರತೆ ನೀಡಲಾಗಿದೆ. ಸದ್ಯ ಅಧಿವೇಶನ ಹಿನ್ನೆಲೆ ದೆಹಲಿಗೆ ತೆರಳಿರುವ ಸಂಸದ ನಳಿನ್ ಕುಮಾರ ಕಟೀಲ್. 

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಚಿವರು, ಶಾಸಕರೊಂದಿಗೆ ಡಿಕೆಶಿ ಸಭೆ: ಕಾರಣವೇನು?

Latest Videos
Follow Us:
Download App:
  • android
  • ios