Asianet Suvarna News Asianet Suvarna News

Jana Sankalpa Yatre: ವರ್ಷದೊಳಗೆ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ವಿತರಣೆ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಇದರೊಂದಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Distribution of health cards to 4 crore people within the year CM Bommai
Author
First Published Nov 23, 2022, 7:55 PM IST

ದಾವಣಗೆರೆ (ನ.23): ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಇದರೊಂದಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ (Janasankalpa) ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಡಬಲ್ ಇಂಜಿನ್ (Double Engine) ಸರ್ಕಾರವಿರುವ ಕಾರಣ  ಹರಿಹರದ ಅಭಿವೃದ್ಧಿ (Harihara Development) ಸಾಧ್ಯವಾಗುತ್ತದೆ.  ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುವ ನೀತಿಯಿಂದ 58 ಲಕ್ಷ ರೈತ ಕುಟುಂಬಗಳಿಗೆ (Farmer Family) 10 ಸಾವಿರ ರೂ.ಗಳನ್ನು ಕೃಷಿ ಸಮ್ಮಾನ (Krishi samman) ಯೋಜನೆ ಮೂಲಕ ನೀಡಲಾಗುತ್ತಿದೆ. ಮುದ್ರಾ (Mudra) ಯೋಜನೆಯಡಿ ರಾಜ್ಯದ 19 ಲಕ್ಷ ಯುವಕರ ಸಣ್ಣ ಉದ್ದಿಮೆಗಳಿಗೆ (Small Industry) ಆರ್ಥಿಕ ಸಹಾಯ ಕೊಡಲಾಗಿದೆ ಎಂದರು.

Jana Sankalpa Yatre: ಭ್ರಷ್ಟಾಚಾರ ಹುಟ್ಟು ಹಾಕಿದ್ದಕ್ಕೆ ಎಲ್ಲಾ ರಾಜ್ಯದಲ್ಲಿ ಕಾಂಗ್ರೆಸ್ ಮೂಲೆಗುಂಪು: ಬೊಮ್ಮಾಯಿ

ರಾಜ್ಯದಲ್ಲಿ ಸರ್ವ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಆಯುಷ್ಮಾನ್ ಭಾರತ (Ayusman Bharath) ಯೋಜನೆಯಡಿ 1 ಕೋಟಿ ಆರೋಗ್ಯ ಕಾರ್ಡ್ (Health Card)  ನೀಡಲಾಗಿದೆ. ಮುಂದಿನ ವರ್ಷದೊಳಗೆ 4 ಕೋಟಿ ಜನರಿಗೆ ಕಾರ್ಡ ವಿತರಿಸಲಾಗುತ್ತದೆ. ಇನ್ನು 10 ಲಕ್ಷ ರೈತರ ಮಕ್ಕಳು ಉತ್ತಮ ಶಿಕ್ಷಣ ಹೊಂದಲು ಅನುಕೂಲವಾಗುವಂತೆ ರೈತ ವಿದ್ಯಾನಿಧಿ (Raitha Vidyanidhi)ಯನ್ನು ನೀಡಲಾಗುತ್ತಿದೆ. 6 ಲಕ್ಷ ರೈತ ಕೂಲಿಕಾರರು, ಮೀನುಗಾರರು, ನೇಕಾರರ , ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ ಎಂದು ಹೇಳಿದರು.

ತಳಸಮುದಾಯದವರ ಏಳಿಗೆ  ಸರ್ಕಾರದ ಗುರಿ: ಮಹಿಳಾ ಸಬಲೀಕರಣಕ್ಕೆ ಬದ್ಧರಾಗಿರುವ ನಮ್ಮ ಸರ್ಕಾರ ಸ್ತ್ರೀ ಸಾಮರ್ಥ್ಯ ಯೋಜನೆ ಮತ್ತು ಯುವಕರಿಗೆ ಸ್ವಯಂ ಉದ್ಯೋಗ (Self Employment) ಕಲ್ಪಿಸುವ ಸ್ವಾಮಿ ವಿವೇಕಾನಂದ (Vivekananda) ಯುವಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಎಸ್.ಸಿ. ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳ, 100 ಅಂಬೇಡ್ಕರ್ ಹಾಸ್ಟೆಲ್, 50 ಕನಕದಾಸ ಹಾಸ್ಟೆಲ್ ಗಳ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಎಸ್ ಸಿ ಎಸ್ ಟಿ ಸಮುದಾಯದ ಬಡಜನರಿಗೆ  75 ಯೂನಿಟ್ ಉಚಿತ ವಿದ್ಯುತ್ ಸೇರಿ ಒಟ್ಟಾರೆ 28 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ, ಎಸ್ ಟಿ (SC,ST) ಕಾರ್ಯಕ್ರಮಗಳಿಗೆ ಮೀಸಲಿಡಲಾಗಿದೆ. ತಳಸಮುದಾಯದವರ ಏಳಿಗೆಯೇ ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.

ಬೊಮ್ಮಾಯಿ ವಿರುದ್ಧವೇ ದೂರು ಕೊಟ್ಟಿದ್ದೇವೆ, ಯಾರ ವಿರುದ್ಧ ಸಿಎಂ ತನಿಖೆ ಮಾಡಿಸ್ತಾರೆ?: ಸಿದ್ದು

ಕುರಿಗಾಹಿ ಸಂಘಕ್ಕೆ ಕುರಿಗಳ ವಿತರಣೆ: ನಮ್ಮ ಸರ್ಕಾರ ಕುರಿಗಾಹಿಗಳ ಸಂಘಕ್ಕೆ 20 ಕುರಿ ಮತ್ತು 1 ಮೇಕೆಯನ್ನು ನೀಡುವ ಮೂಲಕ ಕುರಿಗಾಹಿ (shepherd)ಗಳ ಜೀವನ ಸುಧಾರಣೆಗೆ ಯೋಜನೆ ರೂಪಿಸಲಾಗಿದೆ. 354 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಡಿಸೆಂಬರ್ (December) ತಿಂಗಳಲ್ಲಿ ಚಾಲನೆ ನೀಡಲಾಗುವುದು. ಹರಿಹರದಲ್ಲಿ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ  ಕೈಗಾರಿಕಾ (Industry) ಕ್ಷೇತ್ರವನ್ನಾಗಿ ಮಾಡುವ ಮೂಲಕ ಇಲ್ಲಿನ ಯುವಕರಿಗೆ ಉದ್ಯೋಗವನ್ನು ನೀಡಲಾಗುವುದು. ಹರಿಹರದಲ್ಲಿ ಏತನೀರಾವರಿ (Irrigation) ಯೋಜನೆಗೆ ಅನುಮತಿಯನ್ನು ಶೀಘ್ರದಲ್ಲಿ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಸಂಸದರಾದ ಜಿ.ಎಂ.‌ಸಿದ್ದೇಶ್ವರ್, ಶಾಸಕರಾದ  ಎಂ.ಪಿ. ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಕೆ.ಎಸ್‌ ನವೀನ್ ಮತ್ತಿತರರು ಹಾಜರಿದ್ದರು.‌

Follow Us:
Download App:
  • android
  • ios