ಜನವರಿಯಿಂದ ಮತ್ತೆ ಸ್ಯಾನಿಟರಿ ನ್ಯಾಪ್ಕಿನ್‌ ವಿತರಣೆ: ಸಚಿವ ದಿನೇಶ್‌ ಗುಂಡೂರಾವ್‌

ಕೊರೋನಾ ಸೇರಿ ವಿವಿಧ ಕಾರಣದಿಂದಾಗಿ 2019-20ರಿಂದ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆ ಸ್ಥಗಿತಗೊಂಡಿದೆ. ಇದೀಗ ಆ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ 19 ಲಕ್ಷ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ 

Distribution of sanitary napkin again from January 2024 Says Minister Dinesh Gundu Rao grg

ವಿಧಾನಪರಿಷತ್(ಡಿ.05):  ರಾಜ್ಯದಲ್ಲಿ 10ರಿಂದ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಯೋಜನೆಗೆ ಜನವರಿಯಿಂದ ಮರು ಚಾಲನೆ ನೀಡಲಾಗುತ್ತಿದ್ದು, ಈ ಬಾರಿ ಶಾಲೆ ಮತ್ತು ವಿದ್ಯಾರ್ಥಿನಿ ನಿಲಯಗಳಲ್ಲೇ ನ್ಯಾಪ್‌ಕಿನ್‌ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಜೆಡಿಎಸ್‌ನ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿನೇಶ್‌ ಗುಂಡೂರಾವ್‌, ಕೊರೋನಾ ಸೇರಿ ವಿವಿಧ ಕಾರಣದಿಂದಾಗಿ 2019-20ರಿಂದ ಸ್ಯಾನಿಟರಿ ನ್ಯಾಪ್‌ಕಿನ್ ವಿತರಣೆ ಸ್ಥಗಿತಗೊಂಡಿದೆ. ಇದೀಗ ಆ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ 19 ಲಕ್ಷ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ. 

ಭ್ರೂಣ ಹತ್ಯೆ ತಡೆ ಕಾಯ್ದೆ ಇನ್ನಷ್ಟು ಬಿಗಿ: ಸಚಿವ ದಿನೇಶ್ ಗುಂಡೂರಾವ್

ಕಳೆದ ಬಾರಿ ಆಸ್ಪತ್ರೆಗಳು ಸೇರಿದಂತೆ ಇನ್ನಿತರ ಕಡೆಗಳನ್ನು ಸ್ಯಾನಿಟರಿ ನ್ಯಾಪ್‌ಕಿನ್‌ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಗುತ್ತಿಗೆ ಸಂಸ್ಥೆಗಳು ಶಾಲೆ ಮತ್ತು ವಿದ್ಯಾರ್ಥಿನಿ ನಿಲಯಗಳಲ್ಲೇ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವಂತೆ ಮಾಡಲಾಗುತ್ತಿದೆ. ಈ ಯೋಜನೆಗಾಗಿ 40 ಕೋಟಿ ರು. ಖರ್ಚು ಮಾಡಲಾಗುತ್ತಿದೆ ಎಂದರು.

Latest Videos
Follow Us:
Download App:
  • android
  • ios