ಶಾಸಕರ ದೂರು ದುಮ್ಮಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೋಮವಾರದಿಂದ ಮೂರು ದಿನಗಳ ಕಾಲ ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ.

ಬೆಂಗಳೂರು (ಆ.6) :  ಶಾಸಕರ ದೂರು ದುಮ್ಮಾನ ಕೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೋಮವಾರದಿಂದ ಮೂರು ದಿನಗಳ ಕಾಲ ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ.

ಇತ್ತೀಚೆಗೆ ನಡೆದಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಬಗ್ಗೆ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಶಾಸಕರ ಅಹವಾಲು ಕೇಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದರಂತೆ ಕಾಂಗ್ರೆಸ್‌ ಶಾಸಕರ ಅಹವಾಲು ಕೇಳಲು ಸೋಮವಾರದಿಂದ ಮೂರು ದಿನ ಸಭೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಬಂಧಪಟ್ಟಜಿಲ್ಲಾ ಸಚಿವರು, ಶಾಸಕರೊಂದಿಗೆ ಸಭೆ ನಡೆಯಲಿದೆ.

ನಾಳೆಯಿಂದ ಗರ್ಭಿಣಿಯರು, ಮಕ್ಕಳಿಗೆ ಇಂದ್ರಧನುಷ್‌ 5.0 ಲಸಿಕೆ ಅಭಿಯಾನ

ಸಭೆಯ ವಿವರ:

ಸೋಮವಾರ ಬೆಳಗ್ಗೆ 11ರಿಂದ 12ರವರೆಗೆ ತುಮಕೂರು ಸಭೆ: ಬೆಳಗ್ಗೆ 11 ಗಂಟೆಗೆ ಗೃಹ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌, ಸಚಿವ ಎನ್‌.ರಾಜಣ್ಣ, ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಡಾ.ಎಚ್‌.ಡಿ.ರಂಗನಾಥ್‌, ಎಸ್‌.ಆರ್‌.ಶ್ರೀನಿವಾಸ್‌, ಎಚ್‌.ಬಿ.ವೆಂಕಟೇಶ್‌, ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ ಅವರೊಂದಿಗೆ ಸಭೆ.

ಮ.12ರಿಂದ 1 ಗಂಟೆವರೆಗೆ ಯಾದಗಿರಿ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತನ್ನೂರು ಭಾಗವಹಿಸಲಿದ್ದಾರೆ.

ಮ.1ರಿಂದ 2 ಗಂಟೆವರೆಗೆ ಚಿತ್ರದುರ್ಗ ಸಭೆ: ಚಿತ್ರದುರ್ಗ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌, ಶಾಸಕರಾದ ಎನ್‌.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ ಅವರಿಗೆ ಭಾಗವಹಿಸಲು ಆಹ್ವಾನ ನೀಡಲಾಗಿದೆ.

ಸಂಜೆ 4ರಿಂದ ಬಾಗಲಕೋಟೆ ಸಭೆ: ಸಂಜೆ 4 ಗಂಟೆಯಿಂದ 5 ಗಂಟೆವರೆಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ, ಶಾಸಕರಾದ ಜೆ.ಟಿ.ಪಾಟೀಲ್‌, ಬಿ.ಬಿ.ಚಿಮ್ಮನಕಟ್ಟಿ, ಎಚ್‌.ವೈ.ಮೇಟಿ, ವಿಜಯಾನಂದ ಕಾಶೆಪ್ಪನವರ್‌ ಅವರೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ.

ಗೃಹ ಜ್ಯೋತಿ ಯೋಜನೆ ಚಾಲನೆ: ಸಿಎಂ ಕಾರ್ಯ​ಕ್ರ​ಮ​ದಲ್ಲಿ ಭದ್ರತಾ ಲೋಪ​ವಾ​ಗ​ದಿ​ರ​ಲಿ, ಪ್ರಿಯಾಂಕ್‌

ಸಂಜೆ 5 ರಿಂದ ಬಳ್ಳಾರಿ ಸಭೆ: ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕರಾದ ಈ.ತುಕಾರಾಂ, ಜೆ.ಎನ್‌.ಗಣೇಶ್‌, ಬಿ.ಎಂ.ನಾಗರಾಜ, ನಾರಾ ಭರತ್‌ ರೆಡ್ಡಿ ಅವರು ಬಳ್ಳಾರಿ ಶಾಸಕರ ಅಹವಾಲು ಆಲಿಸುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6ರಿಂದ ಧಾರವಾಡ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌, ನವಲಗುಂದ ಶಾಸಕ ಕೋನರೆಡ್ಡಿ, ಧಾರವಾಡದ ವಿನಯ್‌ ಕುಲಕರ್ಣಿ, ಹುಬ್ಬಳ್ಳಿ-ಧಾರವಾಡ ಪೂರ್ವ ಅಬ್ಬಯ್ಯ ಪ್ರಸಾದ್‌, ವಿಧಾನಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಅವರು ಧಾರವಾಡ ಸಭೆಯಲ್ಲಿ ಹಾಜರಿದ್ದು ಅಹವಾಲು ಹೇಳಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.