ಬೆಂಗಳೂರಿನ ದಾಸರಹಳ್ಳಿಯ ಸ್ಕ್ರಾಪ್ ಗೋಡೌನ್ನಲ್ಲಿ ಸಂಭವಿಸಿದ ಬೆಂಕಿ ಅವಘಡವನ್ನು ಅಗ್ನಿಶಾಮಕ ಸಿಬ್ಬಂದಿ ನಿಯಂತ್ರಿಸಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಮತ್ತೊಂದೆಡೆ, ಧಾರವಾಡ ಬಳಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಹಬ್ಬದ ಸಾಮಗ್ರಿ ತರಲು ಹೋಗಿದ್ದ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.
ಬೆಂಗಳೂರು (ನ.11): ದೀಪಾವಳಿ ಸಂಭ್ರಮದ ನಡುವೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಕ್ರಾಪ್ ಗೋಡಾನ್ನಲ್ಲಿ ಅಗ್ನಿ ದುರಂತ ಸಂಭವಿಸಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ಅಮೃಥಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಡೆದಿದೆ.
ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮೂರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹರಸಾಹಸ ಪಡುವಂತಾಯ್ತು. ಬೆಂಕಿ ಕೆನ್ನಾಲಗೆಗೆ ದಟ್ಟ ಹೊಗೆಯಿಂದ ಸುತ್ತಲು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯ್ತು. ಅಗ್ನಿ ಶಾಮಕ ಸಿಬ್ಬಂದಿ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದು ಬೆಂಕಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ.
ಪ್ಲಾಸ್ಟಿಕ್ ಹಾಗೂ ಇತರೆ ಸ್ಕ್ರಾಪ್ಗಳಿದ್ದ ಉಗ್ರಾಣವಾಗಿದ್ದರಿಂದ ಬೆಂಕಿ ತಕ್ಷಣವೇ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ. ಶಾರ್ಕ್ ಸೆರ್ಕ್ಯೂಟ್ನಿಂದ ಸಂಭವಿಸಿದೆಯೇ ಅಥವಾ ಕಿಡಿಗೇಡಿಗಳ ಕೃತ್ಯವೇ? ಪೊಲೀಸರ ವಿಚಾರಣೆ ಬಳಿಕ ತಿಳಿಯಲಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ಸಂಪೂರ್ಣ ನಂದಿಸಿದ್ದಾರೆ.
ಧಾರವಾಡ: ತಡರಾತ್ರಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಸಹೋದರರು ದುರ್ಮರಣ!
ಧಾರವಾಡದಲ್ಲಿ ತಡರಾತ್ರಿ ಆಘಾತಕಾರಿ ನಡೆದಿದೆ. ಸಹೋದರರಿಬ್ಬರು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ದುರ್ಮರಣಕ್ಕೀಡಾದ ಘಟನೆ ಧಾರವಾಡ ಜಿಲ್ಲೆಯ ಹಾರೋಬೆಳವಡಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಗುಮ್ಮಗೋಳ ಗ್ರಾಮದ ಸಂಗಮೇಶ್ (23), ಇನ್ನೋರ್ವ ಸಹೋದರ ಸಾವು. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಸಂಗಮೇಶ್ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಸಹೋದರ ಗಂಭೀರವಾಗಿ ಗಾಯಗೊಂಡಿದ್ದರು. ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ದೀಪಾವಳಿ ಹಬ್ಬಕ್ಕೆಂದು ಸಹೋದರರಿಬ್ಬರು ಆಲಂಕಾರಿಕ ವಸ್ತುಗಳುನ್ನು ತರಲು ಹೋಗಿದ್ದರು. ಈ ವೇಳೆ ಗ್ರಾಮದ ಕ್ರಾಸ್ ಹೆದ್ದಾರಿ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬ ಇದೀಗ ಸಹೋದರರಿಬ್ಬ ದುರ್ಮರಣದಿಂದಾಗಿ ಶೋಕ ಸಾಗರದಲ್ಲಿ ಮುಳುಗಿದೆ. ದೀಪಾವಳಿ ಹಬ್ಬದಂದೇ ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಧಾರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














