ಕಿಡಿಗೇಡಿಗಳಿಗೆ ಅಪರಿಚಿತನಿಂದ ಹಣ ಹಂಚಿಕೆ? ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪೂರ್ವಯೋಜಿತ ಕೃತ್ಯ ಆರೋಪಕ್ಕೆ ಪುಷ್ಟಿ| ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದ ದುಷ್ಕರ್ಮಿಗಳಿಬ್ಬರು| ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದ ಇಬ್ಬರು ಯುವಕರಿಗೆ ಹಣ ಕೊಡಲು ಮುಂದಾಗಿದ್ದ ಆರೋಪಿ|
ಬೆಂಗಳೂರು(ಆ.13): ಕಿಡಿಗೇಡಿಗಳು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತನೊಬ್ಬ ಹಣ ಕೊಟ್ಟಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ದುಷ್ಕರ್ಮಿಗಳಿಬ್ಬರು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಡಿಯೋ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದ ಇಬ್ಬರು ಯುವಕರಿಗೆ ಹಣ ಕೊಡಲು ಮುಂದಾಗಿದ್ದಾನೆ. ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬಂದ ಆತನ ಬಳಿ ಎರಡು ಕಂತೆಯ ಹಣ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಪೈಗಂಬರ್ ಅವಹೇಳನ ಆರೋಪ: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?
ಈ ಹಣ ಪಡೆಯುವ ವಿಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ನೋಡಿದರೆ ಕೃತ್ಯ ನಿಜಕ್ಕೂ ಮೊದಲೇ ಪೂರ್ವ ನಿಯೋಜಿತ ಎಂಬಂತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ದ್ವಿಚಕ್ರ ವಾಹನ ಸಂಖ್ಯೆ ಅಸ್ಪಷ್ಟವಾಗಿದೆ. ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಲಾಗುವುದು. ವಿಚಾರಣೆ ಬಳಿಕ ಯಾವ ಉದ್ದೇಶಕ್ಕೆ ಹಣ ನೀಡಿದ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.