ಬೆಂಗಳೂರು (ನ.25): ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬುಧವಾರ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. 

ಸಿಬಿಐ ಸಮನ್ಸ್‌ ಜಾರಿ ಮಾಡಿದ್ದರಿಂದ ವಿಚಾರಣೆಗೆ ಹಾಜರಾಗಿ ವಿವರಣೆ ನೀಡಲಿದ್ದಾರೆ. ನ.23ರಂದು (ಸೋಮವಾರ) ಸಿಬಿಐ ಕೇಂದ್ರ ಕಚೇರಿಗೆ ವಿಚಾರಣೆಗೆ ಬರುವಂತೆ ಸಮನ್ಸ್‌ನಲ್ಲಿ ತಿಳಿಸಲಾಗಿತ್ತು.

ಬೈ ಎಲೆಕ್ಷನ್: ಟಿಕೆಟ್ ಆಕಾಂಕ್ಷಿಗಳ ಬಂಡಾಯ ಶಮನಕ್ಕೆ ಡಿಕೆಶಿ ಮಾಸ್ಟರ್ ಪ್ಲ್ಯಾನ್

 ಆದರೆ, ಆ ದಿನ ಡಿ.ಕೆ.ಶಿವಕುಮಾರ್‌ ಉತ್ತರ ಕರ್ನಾಟಕದ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಪ್ರವಾಸ ಇದ್ದ ಕಾರಣ ನ.23ರ ಬದಲಿಗೆ ನ.25ಕ್ಕೆ ವಿಚಾರಣೆ ಬರುವುದಾಗಿ ಸಿಬಿಐಗೆ ಮನವಿ ಮಾಡಿದ್ದರು.

ಈ ಮನವಿಗೆ ಸಿಬಿಐ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ನ.25ರಂದು ವಿಚಾರಣೆ ಬರುವಂತೆ ಸೂಚಿಸಿದ್ದರು.