ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜ್ವರದಿಂದ ಬಳಲಿದ್ದಾರೆ. ಇದರ ಪರಿಣಾಮ ಕನಿಷ್ಠ ಮೂರು ದಿನಗಳ ಕಾಲ ವಿಶ್ರಾಂತಿಗೆ ಜಾರಿದ್ದರೆ. ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರೆ. ಇತ್ತ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು (ಜು.21) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜ್ವರದಿಂದ ಬಳಲಿದ್ದಾರೆ. ತೀವ್ರ ಜ್ವರದಿಂದ ಬಳಲಿದ ಡಿಕೆ ಶಿವಕುಮಾರ್‌ಗೆ ವೈದ್ಯರು ಕನಿಷ್ಠ ಮೂರು ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್‌ಗೆ ಕರೆ ಮಾಡಿದ ಕಾಂಗ್ರೆಸ್ ಉಸ್ತವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ.

ಯಾರನ್ನೂ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ

ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕರೆ ಮಾಡಿ ಆರೋಗ್ಯ ವಿಚಾರಿಸಿದ ಸುರ್ಜೇವಾಲ

ಡಿಕೆ ಶಿವಕುಮಾರ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಡಿಕೆ ಶಿವಕುಮಾರ್ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಜ್ವರದಿಂದ ಬಳಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಷ್ಟೇ ಅಲ್ಲ ಶೀಘ್ರದಲ್ಲೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಸುರ್ಜೇವಾಲ ಎಕ್ಸ್ ಮೂಲಕ ಹೇಳಿದ್ದಾರೆ.

Scroll to load tweet…

ದೆಹಲಿ ಪ್ರವಾಸ ರದ್ದು ಮಾಡುತ್ತಾರಾ ಡಿಕೆಶಿ

ಕಳೆದ ಕೆಲ ದಿನಗಳಿಂದ ಡಿಕೆ ಶಿವಕುಮಾರ್ ಜ್ವರದಿಂದ ಬಳಲಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಸ್ವತಃ ಮೂರು ದಿನ ಯಾವುದೇ ಸಾರ್ವಜನಕ ಕಾರ್ಯಕ್ರಮ, ಭೇಟಿ, ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಜುಲೈ 25ರಂದು ದೆಹಲಿಗೆ ತೆರಳುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಎಂಎಲ್ ಸಿ ,ಬೋರ್ಡ್ ಚೇರ್ಮನ್ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸುತ್ತೇವೆ ಎಂದಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ದೆಹಲಿ ಗೆ ತೆರಳಿ ಹೈಕಮಾಂಡ್ ಭೇಟಿಯಾಗವುದಾಗಿ ಹೇಳಿದ್ದರು. ಇದೀಗ ವಿಶ್ರಾಂತಿಗೆ ಜಾರಿರುವ ಕಾರಣ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದಗೊಳಿಸುವ ಸಾಧ್ಯತೆ ಹೆಚ್ಚಿದೆ.