ಕೆಪಿಸಿಸಿ ಅಧ್ಯಕ್ಷರಾಗಿ ಮೇ 31ಕ್ಕೆ ಡಿಕೆಶಿ ಪ್ರಮಾಣ
ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುದ್ದೆಗೆ ನೇಮಕವಾದ ಎರಡು ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು(ಮೇ 15): ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹುದ್ದೆಗೆ ನೇಮಕವಾದ ಎರಡು ತಿಂಗಳ ಬಳಿಕ ಮೇ 31ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
‘ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಮೇ 22 ಅಥವಾ 27 ರಂದು ಸರಳ ಸಮಾರಂಭದ ಮೂಲಕ ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ನಿರ್ಧರಿಸಲಾಗಿತ್ತು.
81000 ಸೋಂಕಿತರು: ಚೀನಾ ಹಿಂದಿಕ್ಕುವತ್ತ ಭಾರತ! ಒಂದೇ ದಿನ 99 ಸಾವು
ಆದರೆ, ಶಿವಕುಮಾರ್ ಅವರು ನೊಣವಿನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯರ ಆಶೀರ್ವಾದ ಪಡೆಯಲು ಇತ್ತೀಚೆಗೆ ತೆರಳಿದ್ದು, ಈ ವೇಳೆ ಅಜ್ಜಯ್ಯ ನೀಡಿದ ಸೂಚನೆಯಂತೆ ಮೇ 31ಕ್ಕೆ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ವೇಳೆ ರಾಜ್ಯಾದ್ಯಂತ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕಾರ್ಯಕ್ರಮವೊಂದನ್ನು ರೂಪಿಸಲು ಸಹ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕಾರ್ಯಕ್ರಮವನ್ನು ಪ್ರತಿ ಬೂತ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು. ಈ ಮೂಲಕ ನೂತನ ಅಧ್ಯಕ್ಷರ ನೇಮಕದ ಬಳಿಕ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.