Asianet Suvarna News Asianet Suvarna News

ಸಿದ್ದರಾಮಯ್ಯ, ಡಿಕೆಶಿ ಮೌನ ಧರಣಿ : ಸಚಿವರ ವಜಾಕ್ಕೆ ಆಗ್ರಹ

  • ಉತ್ತರ ಪ್ರದೇಶ ಲಖೀಂಪುರದಲ್ಲಿ ರೈತರ ಮಾರಣಹೋಮ ನಡೆಸಿದ ಅಪರಾಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
  •  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಮೌನ ಪ್ರತಿಭಟನೆ
DK shivakumar Siddaramaiah will hold silent protest on uttar pradesh incident snr
Author
Bengaluru, First Published Oct 11, 2021, 7:48 AM IST

 ಬೆಂಗಳೂರು (ಅ.11):  ಉತ್ತರ ಪ್ರದೇಶ (Uttara pradesh) ಲಖೀಂಪುರದಲ್ಲಿ ರೈತರ ಮಾರಣಹೋಮ ನಡೆಸಿದ ಅಪರಾಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಇಂದು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ರೈತರ (farmers) ಮೇಲೆ ವಾಹನ ಚಲಾಯಿಸಿ ಸಾಯಿಸಿದರೂ ಈವರೆಗೂ ಕ್ರಮ ಆಗಿಲ್ಲ. ಇದಕ್ಕೆ ಪ್ರಚೋದನೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ (Ajay Mishra) ಅವರನ್ನು ಸಂಪುಟದಿಂದ ವಜಾಗೊಳಿಸಿಲ್ಲ. ಹೀಗಾಗಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಹತ್ಯಾಕಾಂಡಕ್ಕೆ ಸಂಬಂಧಪಟ್ಟವರನ್ನೆಲ್ಲ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ (Congress) ಮೌನ ಪ್ರತಿಭಟನೆ ಹಮ್ಮಿಕೊಂಡಿದೆ.

ಡಿಕೆಶಿ- ರಮೇಶ್‌ ಜಾರಕಿಹೊಳಿ ಆಪ್ತರ ಭೇಟಿ : ಕುತೂಹಲದ ನಡೆ

ನಗರದ ಕಾಂಗ್ರೆಸ್‌ ಭವನದ ಬಳಿ ಶಿವಕುಮಾರ್‌, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಕೇಂದ್ರ ಸರ್ಕಾರ (Central govt) ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ (Protest) ನಡೆಸಿ, ರೈತರಿಗೆ ನ್ಯಾಯ ಒದಗಿಸಲು ಒತ್ತಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ವೈ ನಿಯಂತ್ರಿಸಲೆಂದೇ ಆದಾಯ ತೆರಿಗೆ ದಾಳಿ: ಡಿಕೆಶಿ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರನ್ನು ನಿಯಂತ್ರಿಸುವ ಉದ್ದೇಶದಿಂದಲೇ ಅವರ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ (income Tax) ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಇದರ ಹಿಂದೆ ಒಳ ರಾಜಕೀಯದ (politics) ಉದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪನವರ ಆಪ್ತ ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು, ಸಂಬಂಧ ಪಟ್ಟವರು ಅಧಿಕೃತವಾಗಿ ಹೇಳಿಕೆ ನೀಡುವವರೆಗೂ ನಾನು ಹೆಚ್ಚು ಮಾತನಾಡುವುದಿಲ್ಲ. ದಾಳಿಯ ಹಿಂದೆ ಒಳ ರಾಜಕೀಯದ ಉದ್ದೇಶ ಇದ್ದೇ ಇದೆ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ನಿಯಂತ್ರಿಸಲು ಈ ದಾಳಿ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರನ್ನಾದರೂ ಕಂಟ್ರೋಲ…ಗೆ ತರಬೇಕು ಎಂಬ ಉದ್ದೇಶದಿಂದಲೇ ದಾಳಿ ಮಾಡಲಾಗುತ್ತಿದೆ. ಹೀಗಾಗಿ ಐಟಿ ದಾಳಿ ಹಿಂದೆ ಆಂತರಿಕ ರಾಜಕೀಯ ಬೇಕಾದಷ್ಟುಇದೆ. ಕೆಲ ಸಚಿವರು ದೆಹಲಿಗೆ ಹೋಗಿ ನಮ್ಮ ಮನೆಗೆ ಬರಬೇಡಿ ಎಂದು ಹೇಳಿದ್ದಾರೆ. ಕೆಲವರ ರಕ್ಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Follow Us:
Download App:
  • android
  • ios