ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ

ಬೆಂಗಳೂರು (ಆ.24): ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್‌ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕಿಡಿಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಸದಾ ಸುದ್ದಿಯಲ್ಲಿರಬೇಕು ಎಂದು ಆ ಹುಚ್ಚ ಮಾತನಾಡುತ್ತಾನೆ. ದೇಶದಲ್ಲಿ ಕೊರೋನಾ ಜತೆಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಇನ್ನಿಲ್ಲದ ತೊಂದರೆ ಆಗುತ್ತಿದೆ. ಬಿಜೆಪಿಯವರು ಈ ರೀತಿ ಮಾತನಾಡಿ ಇದನ್ನೆಲ್ಲಾ ಮರೆಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕರ ವಿರುದ್ಧ ಇಂತಹ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆ.

'ವಾರ ತಡ್ಕೊಳ್ಳಿ.. ಕಾವೇರಿಯ ಸ್ಫೋಟಕ ದೃಶ್ಯ ನನ್ನ ಬಳಿ ಇದೆ'

ಈ ವೇಳೆ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,

ಸದಾಶಿವನಗರ ನಿವಾಸದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅಷ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳ ಜತೆ ಸೋಮವಾರ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಶಿವಕುಮಾರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.