ಕಾಂಗ್ರೆಸ್ಸಿಗರ ಬಂಧನ ತುರ್ತುಸ್ಥಿತಿಗಿಂತ ಹೀನಾಯ: ಡಿಕೆಶಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ಗಾಂಧಿ ಅವರಿಗೆ ಇಡಿ ಸಮನ್ಸ್‌ ಜಾರಿಗೊಳಿಸಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ ದೆಹಲಿಯ ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ನಾಯಕರನ್ನು ಬಂಧಿಸಿರುವುದು ನೀಚ ರಾಜಕಾರಣ, ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

DK Shivakumar Slams on BJP Over National Herald Case gvd

ಬೆಂಗಳೂರು (ಜೂ.15): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ಗಾಂಧಿ ಅವರಿಗೆ ಇಡಿ ಸಮನ್ಸ್‌ ಜಾರಿಗೊಳಿಸಿ ವಿಚಾರಣೆ ನಡೆಸಿರುವುದನ್ನು ಖಂಡಿಸಿ ದೆಹಲಿಯ ಎಐಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ನಾಯಕರನ್ನು ಬಂಧಿಸಿರುವುದು ನೀಚ ರಾಜಕಾರಣ, ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಅಂದ ಮೇಲೆ ನಮ್ಮ ನಾಯಕರಿಗೆ ಸಮನ್ಸ್‌ ಜಾರಿ ಮಾಡಿರುವುದನ್ನು ನಾವು ವಿರೋಧಿಸುವುದು, ಪ್ರತಿಭಟಿಸುವುದು ನ್ಯಾಯಬದ್ಧವಾಗಿದೆ. ಪ್ರತಿಭಟನೆ ಮಾಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ, ಬಿಜೆಪಿ ನಮಗೆ ಪ್ರತಿಭಟಿಸುವ ಅವಕಾಶವನ್ನೂ ನೀಡದೆ ಹೊಸ ಸಂಪ್ರದಾಯ ಆರಂಭಿಸಿದೆ. ನೆಹರೂ ಕುಟುಂಬದವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಇಂತಹ ನೀಚ ರಾಜಕಾರಣವನ್ನು ಹಿಂದೆಂದೂ ಕಂಡಿಲ್ಲ. ಇದು ತುರ್ತು ಪರಿಸ್ಥಿತಿಗೂ ಮೀರಿದ ಹೀನಾಯ ಸ್ಥಿತಿ. ನಾವಿದನ್ನು ಉಗ್ರವಾಗಿ ಖಂಡಿಸುತ್ತೇವೆ. ಇದಕ್ಕೆಲ್ಲಾ ನಾವು ಹೆದರುವುದಿಲ್ಲ. ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ಸಿಂದ ಸರ್ಕಾರಿ ಕಚೇರಿ ಬಂದ್‌ ಎಚ್ಚರಿಕೆ: ಕೇಂದ್ರಕ್ಕೆ ಸಿದ್ದು, ಡಿಕೆಶಿ ಆಗ್ರಹ

‘ಸೋಮವಾರ ಪ್ರತಿಭಟನೆ ಆರಂಭವಾಗುವ ಮುನ್ನವೇ ನಮ್ಮ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರನ್ನು ಬಂಧಿಸಲು ಪ್ರಯತ್ನಿಸಿದ್ದರು. ಇಂದು ನಮ್ಮ ಹಲವು ನಾಯಕರು ಎಐಸಿಸಿ ಕಚೇರಿಗೆ ಹೋದರೆ, ಅಲ್ಲೇ ಅವರನ್ನು ಬಂಧಿಸುತ್ತೇನೆ ಎಂದರೆ ಇದು ಅನ್ಯಾಯವಲ್ಲವೇ? ನಮ್ಮ ನಾಯಕರು ಯಾವ ಅಪರಾಧ ಮಾಡಿದ್ದಾರೆ? ದೇಶದ ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ನೆಹರೂ, ಬಾಲಗಂಗಾಧರ ತಿಲಕರು ಹಾಗೂ ವಲ್ಲಭಬಾಯಿ ಪಟೇಲರು ಸೇರಿ ಆರಂಭಿಸಿದ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ಉಳಿಸಿಕೊಂಡು ಬಂದಿದ್ದೇವೆ. ಇದು ಖಾಸಗಿ ಆಸ್ತಿಯಲ್ಲ, ದೇಶದ ಆಸ್ತಿ. ನಮ್ಮ ನಾಯಕರು ಕೇವಲ ಟ್ರಸ್ಟಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಈಗ ಟ್ರಸ್ಟಿಯಾಗಿದ್ದಾರೆ. ಅವರೇನು ಅದರ ಆಸ್ತಿನೆಲ್ಲಾ ಬರೆದುಕೊಂಡು ಬಂದಿದ್ದಾರಾ? ನೆಹರೂ ಕುಟುಂಬದವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದು, ಇದಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಹೆದರುವುದಿಲ್ಲ’ ಎಂದರು.

ರಾಹುಲ್‌ ಗಾಂಧಿಯನ್ನು ಬಂಧಿಸಿದರೆ ಉಗ್ರ ಹೋರಾಟ: ಡಿ.ಕೆ.ಶಿವಕುಮಾರ್‌

‘ತಪ್ಪು ಮಾಡಿಲ್ಲ ಎಂದಾದರೆ ವಿಚಾರಣೆ ಎದುರಿಸಬೇಕಲ್ಲವೇ’ ಎಂಬ ಬಿಜೆಪಿ ವಾದದ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಹುಲ್‌ ಗಾಂಧಿ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸುವ ಅಗತ್ಯ ಏನಿದೆ? ಎಲ್ಲ ವಿವರಗಳನ್ನು ಚುನಾವಣೆ ಅಫಿಡವಿಟ್‌ನಲ್ಲಿ ನೀಡಿರಲಿಲ್ಲವೇ? ನಾನೇನು ಮಾಡಿದ್ದೆ ಎಂದು ನನ್ನನ್ನು 10 ದಿನ ವಿಚಾರಣೆ ಮಾಡಿದ್ದರು? ನಾನು ಇನ್ನು ಸಾಕಷ್ಟುವಿಚಾರಗಳ ಬಗ್ಗೆ ಮಾತನಾಡಿಲ್ಲ. ಯಾವ ರೀತಿ ಕಿರುಕುಳ ನೀಡಿದ್ದಾರೆ ಎಂಬುದು ನನಗಷ್ಟೇ ಗೊತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಆದಾಗ ಎಷ್ಟುಹಣ ಸಿಕ್ಕಿತು? ಅವರ ವಿರುದ್ಧದ ಪ್ರಕರಣಗಳು ಇಡಿಗೆ ಏಕೆ ಹೋಗಿಲ್ಲ?’ ಎಂದು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios