Mekedatu Padayatra: ಕಾರಜೋಳಗೆ ಹೋರಾಟ ಮಾಡಿ ಗೊತ್ತಿಲ್ಲ: ಡಿಕೆಶಿ

*  ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ
*  ನಾನೂ ಜಲಸಂಪನ್ಮೂಲ ಸಚಿವನಾಗಿದ್ದೆ. ಅಲ್ಪ ಸ್ವಲ್ಪ ಪರಿಜ್ಞಾನ ಇದೆ
*  ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ 

DK Shivakumar Slams on Minister Govind Karjol grg

ಬೆಂಗಳೂರು(ಮಾ.02): ಕಾಂಗ್ರೆಸ್‌(Congress) ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ(Mekedatu Project) ಸಂಬಂಧಿಸಿದ ಸುಪ್ರೀಂಕೋರ್ಟ್‌ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಎಂದಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ತಿರುಗೇಟು ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾನೂ ಜಲಸಂಪನ್ಮೂಲ ಸಚಿವನಾಗಿದ್ದೆ. ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ(Govind Karjol) ಅವರು ತಮ್ಮ ಅಧಿಕಾರಿಗಳನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಿ. ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಆಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ. ಆದರೆ ನಮಗೆ ಮಹಾತ್ಮಾ ಗಾಂಧೀಜಿ ಅವರು ಅಹಿಂಸಾ ಮಾರ್ಗದ ಹೋರಾಟ ಹೇಳಿಕೊಟ್ಟಿದ್ದು, ಅದು ನಮ್ಮ ರಕ್ತದ ಕಣಗಳಲ್ಲೇ ಬಂದಿದೆ ಎಂದು ತಿರುಗೇಟು ನೀಡಿದರು.

Mekedatu Padaytare: ಕಾಂಗ್ರೆಸ್ ನವರು ಬಿರಿಯಾನಿ ಪಾದಯಾತ್ರೆ ಮಾಡ್ತಿದ್ದಾರೆ: ಡಿಕೆಶಿ

ಶಿವಕುಮಾರ್‌ ಅವರು ಪಾದಯಾತ್ರೆ(Padayatra) ಮೂಲಕ ಅವರ ಅಕ್ರಮ ಹಣವನ್ನು ಪ್ರದರ್ಶಿಸುತ್ತಿದ್ದಾರೆ. ಬಿರಿಯಾನಿ ತಿಂದು ಪಾದಯಾತ್ರೆ ಮಾಡುವುದು ಯಾವ ಹೋರಾಟ ಎಂಬ ಮಾಜಿ ಸಂಸದ ಶ್ರೀನಿವಾಸ್‌ ಪ್ರಸಾದ್ ಅವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾನು ಶ್ರೀನಿವಾಸ್‌ ಪ್ರಸಾದ್‌ ಅವರ ಬಳಿ ಹೋಗಿ ಅವರ ಹಿತವಚನ ಕೇಳಿ, ಕಲಿತುಕೊಳ್ಳುತ್ತೇನೆ’ ಎಂದು ವ್ಯಂಗ್ಯವಾಗಿ ಹೇಳಿದರು.

ಮೇಕೆದಾಟು ಜಾರಿ ಇಚ್ಛಾಶಕ್ತಿ ಬಿಜೆಪಿಗಿಲ್ಲ: ಸುರ್ಜೇವಾಲಾ

ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಇಚ್ಛಾಶಕ್ತಿ ಬಿಜೆಪಿ ಸರ್ಕಾರಗಳಿಗೆ ಇಲ್ಲ. ಇದಕ್ಕಾಗಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ನಾವೆಲ್ಲಾ ಒಟ್ಟಾಗಿ ಹೋರಾಡಿದರೆ ಕಾವೇರಿ ತಾಯಿಯೇ ನಮಗೆ ನ್ಯಾಯ ದೊರಕಿಸುತ್ತಾಳೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲಾ ಹೇಳಿದ್ದರು. 

ಭಾನುವಾರ ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾವೇರಿ ನಮ್ಮ ಜೀವ, ನಮ್ಮ ಸಂಸ್ಕೃತಿ. ನಮ್ಮ ನೀರು ನಮ್ಮ ಹಕ್ಕು. ಈ ನೀರು ಉಳಿಸಿಕೊಳ್ಳಲು ನಾವು ಹೋರಾಡುತ್ತಿದ್ದೇವೆ. ಹೋರಾಡಲೇಬೇಕು ಎಂದು ಕರೆ ನೀಡಿದ್ದರು.

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

ನಮ್ಮ ಹೋರಾಟ ತಡೆಯಲು ಬಿಜೆಪಿ ಯತ್ನಿಸುತ್ತಿದೆ. ಎಲ್ಲಾ ಜಾತಿ, ವರ್ಗಗಳು, ಪಕ್ಷಾತೀತವಾಗಿ ನಮಗೆ ಬೆಂಬಲ ನೀಡಬೇಕು. ಈ ಹೋರಾಟವನ್ನು ನಾವು ಯಶಸ್ವಿಯಾಗಿಸುತ್ತೇವೆ. ಇದು ಭಾಷಣ ಮಾಡುವ ದಿನವಲ್ಲ. ಇತಿಹಾಸ ಬರೆಯುವ ದಿನ. ಕಾವೇರಿ ಮಾತ್ರವಲ್ಲ. ಈ ಭೂಮಿ, ನೀರು ಕೂಡ ನಮಗೆ ಉಳಿಯಬೇಕು. ಕಾವೇರಿ ಪ್ರತಿ ಹನಿ ಮೇಲೂ ಸ್ಥಳೀಯರಿಗೆ ಹಕ್ಕಿದೆ. ನೀವೆಲ್ಲರೂ ಒಗ್ಗಟ್ಟಿನ ಮೂಲಕ ಹೋರಾಟ ಮಾಡಿದರೆ ಕಾವೇರಿ ತಾಯಿಯೇ ನಮಗೆ ನ್ಯಾಯ ದೊರಕಿಸುತ್ತಾಳೆ ಎಂದು ತಿಳಿಸಿದ್ದರು. 

ಪಾದಯಾತ್ರೆ ನಿಂದಿಸಿದರೆ ಜನ ಥೂ ಅಂತಾರೆ: 

‘ಯಾಕಣ್ಣ ನಾಲಿಗೆ ಇದೆ ಎಂದು ಮೇಕೆದಾಟು ಪಾದಯಾತ್ರೆ ಬಗ್ಗೆ ಏನೆಲ್ಲಾ ಮಾತನಾಡುತ್ತಿದ್ದೀರಿ. ಜನ ಛೀ.. ಥೂ ಎಂದು ಉಗಿಯುತ್ತಾರೆ. ನಿಮ್ಮ ನಾಲಿಗೆಯನ್ನು ರಕ್ಷಣೆ ಮಾಡಿಕೊಳ್ಳಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆಯ ಮೊದಲ ದಿನ ಬಿಡದಿಗೆ ಆಗಮಿಸಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಹೇಳಿಕೆಗಳಿಗೆ ಕಿಡಿಕಾರಿದ್ದರು. 
 

Latest Videos
Follow Us:
Download App:
  • android
  • ios