Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷರಾಗಿ ಜೂ.7ರಂದು ಡಿಕೆಶಿ ಅಧಿಕಾರ ಸ್ವೀಕಾರ..?

ಕಳೆದ ಎರಡೂವರೆ ತಿಂಗಳಿಂದ ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮ ಜೂನ್‌ 7ರಂದು ನಡೆಯುವ ಸಾಧ್ಯತೆಯಿದೆ.

DK shivakumar to take oath as kpc president on June 7th
Author
Bangalore, First Published May 23, 2020, 7:27 AM IST
  • Facebook
  • Twitter
  • Whatsapp

ಬೆಂಗಳೂರು(ಮೇ 23): ಕಳೆದ ಎರಡೂವರೆ ತಿಂಗಳಿಂದ ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮ ಜೂನ್‌ 7ರಂದು ನಡೆಯುವ ಸಾಧ್ಯತೆಯಿದೆ.

ಶುಕ್ರವಾರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ನಿಗಮ, ಮಂಡಳಿಗಳ ಮಾಜಿ ಅಧ್ಯಕ್ಷರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈ ವಿಷಯ ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

RBI ರೆಪೋ ದರ ಕಡಿತದ ಬೆನ್ನಲ್ಲೇ ಜೆಕೆ ಟೈಯರ್ಸ್ ಮಹತ್ವದ ಪ್ರಕಣೆ!

ಮೇ 31ರಂದು ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜೂನ್‌ 7ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ನಿಗಮ-ಮಂಡಳಿಗಳ ಮಾಜಿ ಅಧ್ಯಕ್ಷರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಡಿ.ಕೆ. ಶಿವಕುಮಾರ್‌ ಅವರು ಮಾ.11ರಂದು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಳಿಕ ಕೊರೋನಾ ಸೋಂಕು ತೀವ್ರಗೊಂಡು ಲಾಕ್‌ಡೌನ್‌ ಉಂಟಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೇ 11ರಂದು ನಡೆದ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಲಾಕ್‌ಡೌನ್‌ ಕ್ರಮೇಣ ಸಡಿಲಗೊಳ್ಳುತ್ತಿದ್ದು, ಮೇ 27ರಂದು ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವುದು ಒಳಿತು ಚರ್ಚೆಯಾಗಿತ್ತು.

ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ

ಬಳಿಕ ಡಿ.ಕೆ. ಶಿವಕುಮಾರ್‌ ಅವರು ನೊಣವಿನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯರ ಆಶೀರ್ವಾದ ಪಡೆದು ಮೇ 31ರಂದು ಭಾನುವಾರ ಪ್ರಮಾಣವಚನ ಕಾರ್ಯಕ್ರಮ ನಿಗದಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮೇ 31 ರಂದು ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದೆ. ಹೀಗಾಗಿ ಜೂನ್‌ 7ಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ ಎಂದು ಹೇಳಲಾಗಿದೆ.

ಹೊರಗಿಂದ ಬರುವವರಿಗೆ ಕ್ವಾರಂಟೈನ್‌ ಸಡಿಲ, ಹೊಸ ನಿಯಮ ಹೀಗಿದೆ

ಶುಕ್ರವಾರ ನಡೆದ ಸಭೆಯಲ್ಲಿ ಡಿ.ಕೆ. ಶಿವಕುಮಾರ್‌ ಅವರು, ಬೆಂಗಳೂರಿನಲ್ಲಿ ಪ್ರಮುಖ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಇದಕ್ಕೆ ಆಹ್ವಾನಿತರಿಗೆ ಮಾತ್ರ ಅವಕಾಶ ನೀಡಲಾಗುವುದು. ಉಳಿದಂತೆ ಎಲ್ಲಾ ಪಾಲಿಕೆಗಳ ವಾರ್ಡ್‌, ಜಿಲ್ಲಾ ಕೇಂದ್ರ, ತಾಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಮಾಡಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚು ಜನರನ್ನು ಸೇರಿಸಬೇಕು ಎಂದು ಸೂಚಿಸಿದರು ಎಂದು ತಿಳಿದು ಬಂದಿದೆ.

Follow Us:
Download App:
  • android
  • ios