Asianet Suvarna News Asianet Suvarna News

ನೈತಿಕ ಪೊಲೀಸ್‌ಗಿರಿಗೆ ಬೊಮ್ಮಾಯಿ ಸಮರ್ಥನೆ ಅಪಾಯಕಾರಿ: ಡಿಕೆಶಿ

  • ಜನರು ಬಿಜೆಪಿ ಸಿದ್ಧಾಂತಗಳಂತೆ ಬದುಕಬೇಕು ಎಂದು ರಾಜ್ಯ ಸರ್ಕಾರ ಬಯಸಿದಂತಿದೆ. 
  • ನೈತಿಕ ಪೊಲೀಸ್‌ಗಿರಿ ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರಶ್ನೆ
Dk shivakumar unhappy over CM Basavaraj Bommai snr
Author
Bengaluru, First Published Oct 18, 2021, 8:32 AM IST

 ಬೆಂಗಳೂರು (ಅ.18):  ಜನರು ಬಿಜೆಪಿ ಸಿದ್ಧಾಂತಗಳಂತೆ ಬದುಕಬೇಕು ಎಂದು ರಾಜ್ಯ ಸರ್ಕಾರ ಬಯಸಿದಂತಿದೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸಂವಿಧಾನದಲ್ಲಿ ಅವಕಾಶ ಇದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರಶ್ನೆ ಎತ್ತಿರುವ ಅವರು, ಜನರು ಬಿಜೆಪಿಯ ಸಿದ್ಧಾಂತಗಳಂತೆ ಬದುಕಬೇಕು ಎಂದು ಸರ್ಕಾರ ಭಾವಿಸಿದಂತಿದೆ. ಮಹಿಳೆಯರ ಹಕ್ಕು ಕಿತ್ತುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಯುವ ಜನರನ್ನು ಹಿಂಸಾತ್ಮಕ ದಾರಿಗೆ ನೂಕುತ್ತಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಗೌರವಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎನ್ನುವ ಮೂಲಕ ನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ. ದ್ವೇಷ ಹರಡುವ ಕೆಲಸವನ್ನು ಅವರು ಸಮರ್ಥಿಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

'ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಅಚ್ಚೇ ದಿನ ಬರಲ್ಲ '

ಒಂದು ವೇಳೆ ನೈತಿಕ ಪೊಲೀಸ್‌ಗಿರಿಗೆ ಅವಕಾಶ ನೀಡಿದರೆ ಜನಸಾಮಾನ್ಯರು ಯಾವ ಬಟ್ಟೆಹಾಕಬೇಕು. ಯಾವ ಬ್ರ್ಯಾಂಡ್‌ ಕಾಫಿ ಕುಡಿಯಬೇಕು ಎಂಬುದನ್ನು ಬಿಜೆಪಿಯವರು ನಿರ್ಧರಿಸುವ ಕಾಲ ಬರುತ್ತದೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ತ್ರಿಶೂಲಾಸ್ತ್ರ

 

ದಸರಾ (Dasara) ಹಬ್ಬದ ನಿಮಿತ್ತ ಕೆಲ ಪೊಲೀಸ್ ಠಾಣಾ ಸಿಬ್ಬಂದಿ ಸಾಂಸ್ಕೃತಿಕ ಧಿರಿಸಿನಲ್ಲಿ (Dress Code) ಫೋಟೋಶೂಟ್‌ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕುಟುಕಿದ್ದಾರೆ.

 ಮಂಗಳೂರಿನಲ್ಲಿ (Mangaluru) ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ಹಾಗೂ ವಿಜಯಪುರ (Vijayapura), ಕಾಪು ಪೊಲೀಸ್ (Police) ಠಾಣೆಯ ಸಿಬ್ಬಂದಿ ಉಡುಗೆ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ ಎಂದು  ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

ಬಿಎಸ್‌ವೈ ಭೇಟಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಪೊಲೀಸರ ಧಿರಿಸು ಮಾತ್ರ ಯಾಕೆ ಬದಲಾಯಿಸಿದ್ದೀರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು ಎಂದು ಹರಿಹಾಯ್ದಿದ್ದಾರೆ.

 ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ, ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಗೂಂಡಾಗಿರಿಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿದ 'ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ'. ಹಾಗಾಗಿ 'ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕ' ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ

Follow Us:
Download App:
  • android
  • ios